
ಚಾಮರಾಜನಗರ: ತಾಲ್ಲೂಕಿನ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸೆಕ್ಟರ್ ಆಗಿ ಕಾರ್ಯ ನಿರ್ವಹಿಸಿಸುತ್ತಿದ್ದ ನಾಗನಾಯಕ (೫೧) ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಸ್ತೂರು ಬಂಡಿಜಾತ್ರಾ ಮಹೋತ್ಸವ ಅಂಗವಾಗಿ ಕೆಲ್ಲಂಬಳ್ಳಿ ಗ್ರಾಮದಲ್ಲಿ ರಾತ್ರಿಬಂದೋಬಸ್ತ್ ಕರ್ತವ್ಯ ಮುಗಿಸಿ ಮುಂಜಾನೆ ಮನೆಗೆ ತೆರಳಿದ್ದಾರೆ. ನಂತರ ಎದೆನೋವು ಎಂದು ನಗರದ ಖಾಸಗಿ ಆಸ್ಪತ್ರೆಗೆ ತೆರಳಿದ್ದ ಸಂದರ್ಭ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಮೃತರು ಯಳಂದೂರು ತಾಲ್ಲೂಕಿನ ಯರಗಂಬಳ್ಳಿ ಗ್ರಾಮದವರು. ಅವರ ಅಂತ್ಯಕ್ರಿಯೆ ಸ್ವಗ್ರಾಮ ಯರಗಂಬಳ್ಳಿಯಲ್ಲಿ ನೆರವೇರಲಿದೆ.