ಚಾಮರಾಜನಗರ: ತಾಲೂಕಿನ ಬದನಗುಪ್ಪೆ -ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಇಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ನಡೆಯಿತು.
ಬದನಗುಪ್ಪೆ -ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ,ಕಾರ್ಖಾನೆ, ಸಣ್ಣ ಮತ್ತು ಕಿರು ಉದ್ದಿಮೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಹಾಗೂ ಮಾಲೀಕರಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಧಿಕಾರಿಗಳಾದ ಮೋನಾ ರೋತ್ ಅವರ ನೇತೃತ್ವದಲ್ಲಿ ಅರಿವು ಮೂಡಿಸಲಾಯಿತು.
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ವಿಶೇಷ ಸಮಗ್ರ ಪರಿಷ್ಕರಣೆ ಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಉತ್ತೇಜಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್ ಅವರು ಮಾತನಾಡಿ ಇಂದಿನಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ)ಮನೆ ಮನೆಗೆ ಭೇಟಿ ನೀಡಲಿದ್ದಾರೆ.ಪ್ರತಿ ಮತದಾರರಿಗೆ ಗಣತಿ ನಮೂನೆ (ಎನ್ಯುಮಿರೇಶನ್ ಫಾರ್ಮ್) ವಿತರಿಸಲಿದ್ದಾರೆ.ಇದನ್ನು ಭರ್ತಿ ಮಾಡಿ ನೀಡಬೇಕು ಎಂದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಪ್ರಕ್ರಿಯೆ ಕುರಿತು ವೇಳಾಪಟ್ಟಿ ಯ ಅಂಶಗಳ ಬಗ್ಗೆ ಅರಿವು ಮೂಡಿಸುವ ಭಿತ್ತಿ ಫಲಕಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀ ಕಂಠರಾಜೇ ಅರಸ್,ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ದೊರೈರಾಜು,ಸಹಾಯಕ ನಿರ್ದೇಶಕರಾದ ವಿಜಯ್ ಕುಮಾರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.