ಚಾಮರಾಜನಗರ: ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೂಜ್ಯ ಜಗದ್ಗುರುಗಳು ಹಾಗೂ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣೆ ಕಾರ್ಯಕ್ರಮ ನಡೆಯಿತು.
ನಗರದ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಸ್ಮರಣೆ ಕಾರ್ಯಕ್ರಮವನ್ನು ಮಲೆ ಮಹದೇಶ್ವರ ಕ್ಷೇತ್ರ ಪ್ರಾಧಿಕಾರದ ಕಾರ್ಯದರ್ಶಿಗಳಾದ ಸರಸ್ವತಿಯ ಅವರು ಉದ್ಘಾಟಿಸಿ, ಬಾಲಗಂಗಾಧರನಾಥ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಅಕ್ಷರ ಮತ್ತು ದಾಸೋಹ, ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು. ಎಲ್ಲ ವರ್ಗದ ಮಕ್ಕಳನ್ನು ಸಹ ಸಮಾನವಾಗಿ, ಕಾಣುವ ಮೂಲಕ ಹಲವಾರು ಕಡೆಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಲಕ್ಷಾಂತರ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡುತ್ತಿರುವುದು ಸಂತಸದ ವಿಷಯ ಎಂದರು.
ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ತೋರಿಸುತ್ತಿದ್ದರು. ಸಾಕಷ್ಟು ಕಡೆಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಸಮಾಜಕ್ಕೆ ಮಾದರಿಯಾಗುವಂತಹ ಕೆಲಸ ಮಾಡಿದ್ದಾರೆ ಎಂದರು.
ನಾವೆಲ್ಲರೂ ಕೂಡಾ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡಬೇಕು ಎಂದರು.
ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ: ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅದರಲ್ಲೂ ಹೆಣ್ಣು ಮಕ್ಕಳಿಗೆ ಹೆಚ್ಚಿನ ಶಿಕ್ಷಣವನ್ನು ಕೊಡಿಸಿ. ನಗರ ಅಥವಾ ಹಳ್ಳಿ ಎಲ್ಲಿಯಾದರೂ ಸಹ ಶಾಲೆಗಳಿಗೆ ಸೇರಿಸಿ ಅವರನ್ನು ಶಿಕ್ಷಣವಂತರನ್ನಾಗಿಸಿ ಅವರ ಭವಿಷ್ಯವನ್ನು ಉಜ್ವಲಗೊಳಿಸುವಂತಾಗಿ, ಇದರಿಂದ ಅವರು ಸಮಾಜಕ್ಕೆ ಮಾದರಿಯಾಗುವರು ಎಂದು ಸಲಹೆ ನೀಡಿದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಹಾಗೂ ಸಮಾಜ ಸೇವಕರಾದ ಎಂ.ಬಿ.ಮಂಜೇಗೌಡ ಅವರು ಮಾತನಾಡಿ, ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಯವರ ಸ್ಮರಣೆ ಕಾರ್ಯಕ್ರಮವನ್ನು ಮಾಡುತ್ತಿರುವುದಕ್ಕೆ ಹಾಗೂ ಸಂಘ ಸಂಸ್ಥೆಗಳು ಕನ್ನಡ ಪರ ಸಂಘಟನೆಗಳು ಹಲವಾರು ಸಮಾಜಿಕ ಸೇವೆಯನ್ನು ಮಾಡುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಬಾಲಗಂಗಾಧರನಾಥ ಸ್ವಾಮೀಜಿ ಅವರು ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯದವರಿಗೂ ಕೂಡಾ ಶಿಕ್ಷಣ ನೀಡುವ ಕೆಲಸ ಮಾಡಿದ್ದರು ಎಂದು ಸ್ಮರಿಸಿದರು.
ಸ್ವಾಮೀಜಿಯವರಿಗೆ ಈಗಾಗಲೇ ಪದ್ಮಭೂಷಣ ಪ್ರಶಸ್ತಿ ಲಭಿಸಿದ್ದು, ಮುಂದಿನ ದಿನಗಳಲ್ಲಿ ಇವರ ಸೇವೆ, ಕಾರ್ಯಗಳನ್ನು ಗುರುತಿಸಿ ಇವರಿಗೆ ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿ ಸಿಗಲೆಂದು ಒತ್ತಾಯಿಸಿದರು.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕಿ ಹೆಚ್.ಎನ್.ಮಂಜುಳಾ ಮಾತನಾಡಿ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಹಾಗೂ ಶ್ರೀ ಶಿವಕುಮಾರಸ್ವಾಮಿಗಳು ಸಮಾಜಕ್ಕೆ ಎರಡು ಕಣ್ಣುಗಳಂತಿದ್ದರು. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಅಖಿಲ ಕರ್ನಾಟಕ ಕನ್ನಡ ಮಹಾಸಭಾ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಸುಮಾರು ವರ್ಷಗಳಿಂದಲೂ ಕೂಡಾ ಕನ್ನಡಕ್ಕೆ ಎಲ್ಲೆ ಧಕ್ಕೆಯಾದರೂ ಕೂಡಾ ಮೊದಲು ಧ್ವನಿ ಎತ್ತುವುದು ನಮ್ಮ ಜಿಲ್ಲೆ ಚಾಮರಾಜನಗರದಲ್ಲಿ ಮಾತ್ರ. ಇಲ್ಲಿ ಅತಿ ಹೆಚ್ಚು ಕನ್ನಡ ಪರ ಸಂಘಟನೆಗಳಿವೆ. ಎಲ್ಲಿಯೂ ಕೂಡಾ ಕನ್ನಡಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕಾವೇರಿ ನೀರಿಗಾಗಿ ಸುಮಾರು 158 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.
ನಮ್ಮ ಸಂಘದ ವತಿಯಿಂದ ಕಳೆದ 35 ವರ್ಷಗಳಿಂದಲೂ ಕೂಡಾ ಸಾಂಸ್ಕøತಿಕ ಹಾಗೂ ಸಾಮಾಜಿಕವಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರುತ್ತಿದ್ದೇವೆ. ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಹಲವಾರು ಗಣ್ಯಾತಿಗಣ್ಯರು, ಸಾಹಿತಿಗಳು, ಸಮಾಜದಲ್ಲಿ ಉತ್ತಮ ಸೇವೆ ಮಾಡುತ್ತಿರುವವರನ್ನು ಗುರ್ತಿಸಿ ಅವರನ್ನು ಸನ್ಮಾನಿಸುತ್ತಾ ಬಂದಿದ್ದೇವೆ ಎಂದರು.
ಮಹಾಸಭಾದ ಪ್ರಧಾನ ಕಾರ್ಯದರ್ಶಿ ಚಾ.ವೆಂ.ರಾಜಗೋಪಾಲ್, ಸಹಕಾರ್ಯದರ್ಶಿ ಪಣ್ಯದಹುಂಡಿರಾಜು, ಚಾಮರಾಜನಗರ ತಆಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಹಾಗೂ ಪ್ರಗತಿಪರ ರೈತರಾದ ಚಿನ್ನಮುತ್ತು, ನಗರಸಭೆ ಮಾಜಿ ಅಧ್ಯಕ್ಷ ಸುರೇಶ್ ನಾಯಕ್, ಸಮಾಜ ಸೇವಕ ಡಾ.ಪರಮೇಶ್ವರಪ್ಪ, ಜಿಲ್ಲಾ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಎಂ.ಜಯಕುಮಾರ್, ಕನ್ನಡ ಚಳುವಳಿ ಹೋರಾಟಗಾರರಾದ ನಿಜಧ್ವನಿ ಗೋವಿಂದರಾಜು, ಚಾ.ರಾ.ಕುಮಾರ್, ಮಾಜಿ ನಗರಸಭಾ ಸದಸ್ಯ ಗಣೇಶ್ ದೀಕ್ಷಿತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ್ ಋಗ್ವೇದಿ, ಮಹೇಶ್‍ಗೌಡ, ಸದಸ್ಯರಾದ ಅರುಣ್‍ಕುಮಾರ್‍ಗೌಡ, ನಂಜುಂಡಸ್ವಾಮಿ, ತಾಂಡವಮೂರ್ತಿ, ವೀರಭದ್ರ, ಮಹೇಶ್‍ಗೌಡ, ಲಿಂಗರಾಜು, ಸಾಗರ್‍ರಾವತ್, ಸೋಮವಾರಪೇಟೆ ಮಂಜು, ರವಿಚಂದ್ರಪ್ರಸಾದ್, ಸುರೇಶ್‍ಗೌಡ ಸೇರಿದಂತೆ ಇತರರು ಹಾಜರಿದ್ದರು.