ಕೆರೆ ನೈಸರ್ಗಿಕ ಜಲಮೂಲಗಳಲ್ಲಿ ಪಿ.ಒ.ಪಿ ಬಣ್ಣ ಲೇಪಿತ ವಿಗ್ರಹಗಳ ವಿಸರ್ಜನೆ ನಿಷೇಧ : ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ: ಸ್ವರ್ಣ ಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದು, ಈ ಪ್ರಕಾರ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿμÉೀಧಿಸಲಾಗಿದೆ.  

ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗಲಿದೆ. ಇದರಿಂದ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೆ ಸಾರ್ವಜನಿಕ ಆರೋಗ್ಯಕ್ಕೂ ದಕ್ಕೆ ಉಂಟಾಗುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಕೆ ಹಾಗೂ ಮಾರಾಟ ನಿμÉೀಧಿಸಲಾಗಿದ್ದು, ನೈಸರ್ಗಿಕ ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ, ನೈಸರ್ಗಿಕ ಬಣ್ಣ ಲೇಪಿತ ಗೌರಿ-ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಪೂಜಿಸಬೇಕು.

ಗೌರಿ-ಗಣೇಶ ಮೂರ್ತಿಗಳನ್ನು ಮನೆಯಲ್ಲೇ ಬಕೆಟ್‍ನಲ್ಲಿ ವಿಸರ್ಜಿಸಬೇಕು ಅಥವಾ ಸ್ಥಳಿಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ನಿಗದಿಪಡಿಸಿರುವ ಸ್ಥಳಗಳಲ್ಲಿ ವಿಸರ್ಜನೆ ಮಾಡಬೇಕು. ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

ಗೌರಿ-ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಆಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ಸ್ಥಳೀಯ ಸಂಸ್ಥೆಗಳು/ಗ್ರಾಮ ಪಂಚಾಯಿತಿಗಳು ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು. ಸಾರ್ವಜನಿಕವಾಗಿ ಸ್ಥಾಪಿಸುವ ಗಣೇಶ ಮೂರ್ತಿಯ ಚಪ್ಪರ ಹಾಗೂ ಉತ್ಸವಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ಯಾವುದೇ ಸಂದರ್ಭದಲ್ಲೂ ನಿμÉೀಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಧ್ವನಿವರ್ದಕ ಬಳಕೆಯನ್ನು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ನಿμÉೀಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *