ಪಿಒಪಿ, ರಾಸಾಯನಿಕ ಬಣ್ಣ ಲೇಪಿತ ಗಣಪತಿ ವಿಗ್ರಹಗಳ ತಯಾರಿಕೆ, ಮಾರಾಟ ನಿಷೇಧ : ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ: ಸರ್ಕಾರದ ಆದೇಶದನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣಪತಿ ವಿಗ್ರಹಗಳ ತಯಾರಿಕೆ, ಸಂಗ್ರಹ, ಮಾರಾಟವನ್ನು ನಿಷೇಧಿಸಲಾಗಿದೆ. ಮಣ್ಣಿನಿಂದ ಮಾಡಿದ ಅಥವಾ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಮಾತ್ರ ಪ್ರತಿಷ್ಠಾಪಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದ್ದಾರೆ. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು 2026ನೇ ಗೌರಿ-ಗಣೇಶೋತ್ಸವ ಸಂಬಂಧ ಗಣೇಶಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತ ಗಣಪತಿ ವಿಗ್ರಹಗಳನ್ನು ತಯಾರಿಸುವ ಹಾಗೂ ಮಾರಾಟ ಮಾಡುವವರಿಗೆ ಪರವಾನಗಿ ನೀಡುವಂತಿಲ್ಲ. ಪರವಾನಗಿ ಪಡೆಯದೆ ಅನಧಿಕೃತವಾಗಿ ತಯಾರಿ ಮಾರಾಟ ಮಾಡುವವರಿಗೆ ಕಾನೂನು ಕ್ರಮಗಳನ್ನು ಜರುಗಿಸಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿಒಪಿ ಹಾಗೂ ಬಣ್ಣದ ವಿಗ್ರಹಗಳಿದ್ದಲ್ಲಿ ಪರಿಶೀಲಿಸಿ ಸುಪರ್ದಿಗೆ ತೆಗೆದುಕೊಳ್ಳಬೇಕು. ಜಿಲ್ಲೆ ಹಾಗೂ ತಾಲೂಕುಗಳಿಗೆ ಹೊರ ಸ್ಥಳಗಳಿಂದ ಬರಬಹುದಾದ ಪಿಒಪಿ ಮೂರ್ತಿಗಳನ್ನು ತಡೆಗಟ್ಟಲು ಚೆಕ್ ಪೊಸ್ಟ್ ನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದರು.

ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿμÁ್ಠಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಲಾಗುವ ಸ್ಥಳಗಳಲ್ಲಿ ವಿಸರ್ಜಿಸಬೇಕು. ಉಚ್ಚ ನ್ಯಾಯಾಲಯದ ಆದೇಶದನ್ವಯ ಪಿಒಪಿ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿμÉೀಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಎಸ್ ಸೇಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‍ಗಳಲ್ಲಿ ಪಕ್ಕದಲ್ಲಿ ಹಸಿ ಕಸ ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಬೇಕಿದೆ. ಗಣೇಶಮೂರ್ತಿ ವಿಸರ್ಜನೆಗೆ ಪ್ರತ್ಯೇಕ ಮೊಬೈಲ್ ಟ್ಯಾಂಕ್ ವಾಹನದ ವ್ಯವಸ್ಥೆ ಮಾಡಬೇಕು. ಸಾರ್ವಜನಿಕವಾಗಿ ಸ್ಥಾಪಿತವಾಗುವ ಗಣಪತಿಯನ್ನು ವಿಸರ್ಜಿಸಲು ನಿರ್ದಿಷ್ಟವಾದ ಜಲಮೂಲಗಳನ್ನು ನಿಗದಿಪಡಿಸಿ ಈಬಗ್ಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮತ್ತು ಪೆÇೀಲಿಸ್ ಇಲಾಖೆಯಿಂದ ನಿಬಂಧನೆಗೊಳ್ಳಪಟ್ಟ ಅನುಮತಿಯನ್ನು ಪಡೆದು ನಂತರವೇ ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅವರು ಮಾತನಾಡಿ ಗಣಪತಿ ಪ್ರತಿಷ್ಠಾಪನೆಗೆ ಮೊದಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಗಣಪತಿ ಸ್ಥಾಪನೆ ಸ್ಥಳದಲ್ಲಿ ವಿದ್ಯುತ್ ಸಂಪರ್ಕ ಸರಿಯಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಯಾವುದೇ ಅವಘಡಗಳಿಗೆ ಅವಕಾಶವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗದುಕೊಳ್ಳಬೇಕು. ವಿಸರ್ಜನಾ ಮೆರವಣಿಗೆ ಸಾಗುವ ಮಾರ್ಗಗಳ ಬಗ್ಗೆ ಮೊದಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಇದೇ ವೇಳೆ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಹೊರತರಲಾಗಿರುವ ಕರಪತ್ರವನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಬಿಡುಗಡೆ ಮಾಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಡಿವೈಎಸ್‍ಪಿ ಸ್ನೇಹರಾಜು, ಮೋಹನ್, ಪರಿಸರ ಅಧಿಕಾರಿ ಉಮಾಶಂಕರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *