ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿರುವ ವಿಷ್ಣುವರ್ಧನ್ ಅವರನ್ನು ಇಂಡಿಯನ್ ಟಿವಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಸ್. ವೆಂಕಟೇಶ್ ಕುಮಾರ್ ಅವರು ಭೇಟಿಯಾಗಿ ಅಭಿನಂದಿಸಿ, ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮೈಸೂರಿನ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನೂತನ ಕಮಿಷನರ್ ಅವರ ಮುಂದಿನ ಕಾರ್ಯಗಳಿಗೆ ಶುಭ ಹಾರೈಸಿದರು. ಭೇಟಿಯ ಸಂದರ್ಭದಲ್ಲಿ ಇಂಡಿಯನ್ ಟಿವಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
