ಚಾಮರಾಜನಗರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಮಾಡುವ ಸಂಬಂಧ ಯುವಜನರು ತಮ್ಮ ವಾಸಸ್ಥಳ ವ್ಯಾಪ್ತಿಯ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಆಗಸ್ಟ್ 6ರಂದು ಬಿಜೆವೈಎಸ್ (ಃಎಙS) ವೈಬ್‍ಸೈಟ್ ಪ್ರಾರಂಭವಾಗಲಿದ್ದು, ಅದರಲ್ಲಿ ನೋಂದಣಿ ಮಾಡಿಕೊಂಡು ಭಾರತ್ ಜೋಡೋ ಯುವ ಸಂಘದ ಸದಸ್ಯತ್ವ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದ್ದಾರೆ.
ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಂದು ಯುವ ಸಂಘ, ಪ್ರತಿ ಪಟ್ಟಣ ಪಂಚಾಯಿತಿ (ಟಿ.ಪಿ) ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಯುವ ಸಂಘ, ಪ್ರತಿ ಪುರಸಭೆ (ಟಿ.ಎಂ.ಸಿ) ವ್ಯಾಪ್ತಿಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದು ಯುವ ಸಂಘ, ಪ್ರತಿ ನಗರಸಭೆ (ಸಿ.ಎಂ.ಸಿ) ವ್ಯಾಪ್ತಿಯಲ್ಲಿ ಸರಾಸರಿ 8 ಸಾವಿರ ಜನಸಂಖ್ಯೆಗೆ ಒಂದು ಯುವ ಸಂಘವನ್ನು ಸ್ಥಾಪಿಸಲು ಎಲ್ಲಾ ಸಮುದಾಯದ 16 ರಿಂದ 35 ವರ್ಷ ವಯೋಮಾನದ ಯುವಜನರು ತಮ್ಮ ವಾಸಸ್ಥಳ ವ್ಯಾಪ್ತಿಯಲ್ಲಿ ಬರುವ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಆಗಸ್ಟ್ 6 ರಂದು ಬಿಜೆವೈಎಸ್ ಃಎಙS ವೈಬ್‍ಸೈಟ್ ಪ್ರಾರಂಭವಾಗಲಿದ್ದು, ಅದರಲ್ಲಿ ನೋಂದಣಿ ಮಾಡಿಕೊಂಡು ಭಾರತ್ ಜೋಡೋ ಯುವ ಸಂಘದ ಸದಸ್ಯತ್ವ ಪಡೆಯಬಹುದು.
ನೊಂದಣಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಮ್ಮ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಯಲ್ಲಿ ಪಡೆಯಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.