ಮಾರ್ಚ್ 3ರಂದು ನಗರದಲ್ಲಿ ಭೀಮ ಗಾಯನ : ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಗೀತೆಗಳ ಮಹೋತ್ಸವ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜನಮಾನಸದಲ್ಲಿ ಜಾಗೃತಗೊಳಿಸುವ ಉದ್ದೇಶದಿಂದ ಭೀಮ ಗಾಯನ ಕಾರ್ಯಕ್ರಮವನ್ನು ಮಾರ್ಚ್ 3 ರಂದು ಸಂಜೆ 5.30 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಆಯೋಜಿಸಲಾಗಿದೆ.

  ಪರಿಶಿಷ್ಟ ಜಾತಿಯ ಕಲಾವಿದರನ್ನೊಳಗೊಂಡ ಕಲಾತಂಡಗಳಿಂದ ಭೀಮ ಗಾಯನ ಕಾರ್ಯಕ್ರಮ ಎರ್ಪಾಡಾಗಿದ್ದು, ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಅಮ್ಮ ರಾಮಚಂದ್ರ ಅವರ ನೇತೃತ್ವದ ಅಮ್ಮ ವಸುಂಧರೆ ಕಲಾತಂಡದ ಕಲಾವಿದರು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ಗಾಯನ ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಧನೆ, ಸಮಾನತೆ, ಅಸ್ಪøಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ, ಸಂವಿಧಾನ ಜಾಗೃತಿ ಕುರಿತ ಗೀತೆಗಳ ಗಾಯನ ನಡೆಯಲಿದೆ. 

     ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಸಮರ್ಪಣೆ ಕಾರ್ಯಕ್ರಮವೇ ಭೀಮ ಗಾಯನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಗೀತೆಗಳ ಈ ಮಹೋತ್ಸವಕ್ಕೆ ಸರ್ವರು ಆಗಮಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮನವಿ ಮಾಡಿವೆ.

Leave a Reply

Your email address will not be published. Required fields are marked *