ಚಾಮರಾಜನಗರ: ನಗರದ ಗುಂಡ್ಲುಪೇಟೆ ರಸ್ತೆಯಲ್ಲಿರುವ ಗ್ರಾಮಾಂತರ ಪೊಲೀಸ್ ಠಾಣೆ ಸಮೀಪದಲ್ಲಿ ಜೆಎಸ್‌ಎಸ್ ಪಬ್ಲಿಕ್ ಸ್ಕೂಲ್, ನರ್ಸಿಂಗ್ ಶಾಲೆ, ನರ್ಸಿಂಗ್ ಕಾಲೇಜ್, ಅಲೈಡ್ ಹೆಲ್ತ್ ಸೈನ್ಸ್‌ಸ್ ಕಾಲೇಜ್ ಮತ್ತು ವಿದ್ಯಾರ್ಥಿನಿಲಯಗಳ ನೂತನ ಕಟ್ಟಡಗಳಿಗೆ ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಸಾನಿಧ್ಯದಲ್ಲಿ ವಿವಿಧ ಮಠಾಧೀಶರು ಜಿಲ್ಲೆಯ ಶಾಸಕರು,ಅಧಿಕಾರಿಗಳು ಭೂಮಿಪೂಜೆ ನೆರವೇರಿಸಿದರು.
ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಸಾನಿಧ್ಯದಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಹೆಚ್
.ಎಂ.ಗಣೇಶಪ್ರಸಾದ್,
ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿನೋತ್ ಪ್ರಿಯ,
ಜಿಲ್ಲಾಧಿಕಾರಿ ಶ್ರೀರೂಪ, ಜಿ.ಪಂ,ಸಿಇಓ ಮೋನಾರೋತ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ,
ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಮಾಜಿ ಸದಸ್ಯರಾದ ಕೆ.ಪಿ.ಸದಾಶಿವಮೂರ್ತಿ
ನವೀನ್ ಕೆರೆಹಳ್ಳಿ, ರತ್ನಮ್ಮ, ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಜೆಎಸ್ ಎಸ್ ಮಹಾವಿದ್ಯಾಪೀಠ ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ. ಆರ್.
ಮಹೇಶ್ ,
ಜೆಎಸ್ಎಸ್ ಸಾಮಾನ್ಯ ಆಡಳಿತ ವಿಭಾಗದ ನಿರ್ದೇಶಕ ಶಂಕರಪ್ಪ, ಸ್ಥಾನಿಕ ಅಭಿಯಂತರಾದ ಎಸ್.ಮಹೇಶ್, ಪಬ್ಲಿಕ್ ಶಾಲೆ ಪ್ರಾಂಶುಪಾಲ ಉಮೇಶ್, ನರ್ಸಿಂಗ್ ಕಾಲೇಜು ಪ್ರಾಂಶುಪಾಲ ವಿನಯ್ ಕುಮಾರ್, ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ
ಸಂಯೋಜಕ ಶಿವನಾಂಕಾರಪ್ಪ, ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ.ಸ್ವಾಮಿ, ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಕೆ.ರವಿಕುಮಾರ್,
ಮುಖಂಡರಾದ ಮೂಡ್ಲುಪುರ ನಂದೀಶ್, ನಿಜಗುಣರಾಜು,
ಯು.ಎಂ.ಪ್ರಭುಸ್ವಾಮಿ, ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜೆಎಸ್ಎಸ್ ಅಧಿಕಾರಿವರ್ಗದವರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.