ಕಾಂಗ್ರೆಸ್‌ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ

  • ರಾಜ್ಯ ಕಾಂಗ್ರೆಸ್‌ ಸರ್ಕಾರ ವಜಾಗೊಳಿಸಲು ಮೂಡ್ಯುಕೂಡು ಪ್ರಕಾಶ್ ಆಗ್ರಹ
  • ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಭಾವಚಿತ್ರ ಹರಿದು ಪ್ರತಿಭಟನಾನಿರತರು ಆಕ್ರೋಶ

ಚಾಮರಾಜನಗರ : ರಾಜ್ಯ ಕಾಂಗ್ರೆಸ್ ರಾಜ್ಯಪಾಲರನ್ನು ಅವಮಾನಿಸಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಅಲ್ಲಿಂದ ಮೆವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಅಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಸರ್ಕಾರ, ಬಿ.ಕೆ.ಹರಿಪ್ರಸಾದ್ ವಿರುದ್ಧ ಘೋಷಣೆ  ಕೂಗಿ ಅವರ ಭಾವಚಿತ್ರ ಹರಿದು ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ ಮಾತನಾಡಿ,
ಕಾಂಗ್ರೆಸ್ ಸರ್ಕಾರ ವಿಧಾನಸಭೆಯಲ್ಲಿ ವಿಶೇಷ ಅಧಿವೇಶನ ಕರೆದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಅವಮಾನಿರುವುದು ಅತ್ಯಂತ ಖಂಡನೀಯವಾದದ್ದು ಹಿಂದಿನಿಂದಲ್ಲೂ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಾ ಬಂದಿದ್ದು, ರಾಜ್ಯಪಾಲರ ಹುದ್ದೆಗೆ ಅಗೌರವ ತರುವ ಕೆಲಸ ಮಾಡುವ ಮೂಲಕ ಸಂವಿಧಾನಕ್ಕೆ ವಿರುದ್ಧ.. ನಡೆದುಕೊಂಡಿದ್ದಾರೆ. ಅಂಬೇಡ್ಕರ್ ಪರ ಎನ್ನುವ ಕಾಂಗ್ರೆಸ್‌ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ.ವಿಧಾನ ಪರಿಷತ್
ಸದಸ್ಯ ಬಿ.ಕೆ.ಹರೀಶ್‌ ಪ್ರಸಾದ್ ಅವರ ದುಂಡಾವರ್ತನೆ ಮಾಡಿರುವುದನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ. ಇದರ ವಿರುದ್ಧ ಬಿಜೆಪಿ ಉಗ್ರ ಹೋರಾಟ ಮಾಡುತ ದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್‌ನಿಂದ ಸಂವಿಧಾನ ಕಗ್ಗೊಲೆ : ಮತ್ತೊಬ್ಬ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಮೂಡ್ನಾಕೂಡು ಪ್ರಕಾಶ್ ಮಾತನಾಡಿ, ಸಂವಿಧಾನ ಪರ ಎನ್ನುವ ಕಾಂಗ್ರೆಸ್‌ ನವರು ಸಂವಿಧಾನವನ್ನು ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಶಾಸಕರು ಸದನದೊಳಗೆ ಸಂವಿಧಾನದ ರಕ್ಷಕರಾದ ರಾಜ್ಯಪಾಲರನ್ನು ಅವಮಾನಿಸಿರುವುದು ರಾಜ್ಯದ ಇತಿಹಾಸದಲ್ಲಿ ದೊಡ್ಡಕಪ್ಪುಚುಕ್ಕಿಯಾಗಿದೆ. ಕಾಂಗ್ರೆಸ್ ಜನಪ್ರತಿನಿಧಿಗಳು ಬಾಯಿಯಲ್ಲಿ ಸಂವಿಧಾನ, ಮೈಯಲ್ಲಿ ವಿಷ ತುಂಬಿಕೊಂಡಿದ್ದಾರೆ. ಅವರು ಇಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಸಂವಿಧಾನ ಗೌರವ ಕೊಡುವುದನ್ನು ಮೊದಲು ಕಲಿಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಚೂಡಾ ಮಾಜಿ ಅಧ್ಯಕ್ಷರಾ
ಆರ್.ಸುಂದರ್, ಕುಲಗಾಣ ಶಾಂತ ಮೂರ್ತಿ, ಜಿಲ್ಲಾ
ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ನಗರ ಮಂಡಲ ಅಧ್ಯಕ್ಷ ಶಿವರಾಜ್, ಗ್ರಾಮಾಂತರ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯಕುಮಾ‌ರ್, ಆನಂದ್ ಭಗರೀಥ್, ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಜಿಲ್ಲಾಧ್ಯಕ್ಷ ಬುಲೆಟ್ ಚಂದ್ರು, ಎಸ್‌ಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಸಮುದ್ರ ಶಿವಣ್ಣ, ಮುಖಂಡರಾದ ಚಂದ್ರಶೇಖರ್, ಮಹೇಶ್, ಚಾಮುಲ್ ಮಾಜಿ ಅಧ್ಯಕ್ಷ  ನಾಗೇಂದ್ರ, ಜಿಲ್ಲಾ ಕಾರ್ಯದರ್ಶಿ ರವೀಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬೇಡರಪುರ ಬಸವಣ್ಣ, ಪುರುಷೋತ್ತಮ್,
ನಲ್ಲೂರು ಪರಮೇಶ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಕೂಸಣ್ಣ, ಹರದನಹಳ್ಳಿ ರವಿ, ಮಾಧ್ಯಮ ಸಹ ವಕ್ತಾರ ಮಂಜುನಾಥ್, ವೀರೇಂದ್ರ,,ಮುಖಂಡರಾದ ವೀರಭದ್ರ ಸ್ವಾಮಿ, ಎಂಎಸ್ ಚಂದ್ರಶೇಖರ್, ಬುಲೆಟ್ ಚಂದ್ರು, ಗುರುಪ್ರಸಾದ್, ಭಾಸ್ಕರ್ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *