ಚಾಮರಾಜನಗರ, ಮಾ.28- ಬಿಜೆಪಿ ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ದೊಡ್ಡರಾಯಪೇಟೆ ಗ್ರಾ.ಪಂ. ಸದಸ್ಯೆ ಮಹೇಶ್ವರಿ ಅವರನ್ನು ನೇಮಕ ಮಾಡಿ ಗ್ರಾಮಾಂತರ ಮಂಡಲದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ಇಂದಿನಿಂದಲೇ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗ್ರಾಮಂತರ ಮಂಡಲದ ವ್ಯಾಪ್ತಿಯಲ್ಲಿ ಮಹಿಳೆಯರನ್ನು ಸಂಘಟಿಸುವ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಹಿಳಾ ಸಬಲೀಕರಣ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ, ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುವ ನಿಟ್ಟಿನಲ್ಲಿ ಸಂಘಟನೆ ಮಾಡುವಂತೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.