ಬಿಜೆಪಿ ಎಸ್ ಸಿ ಮೋರ್ಚಾದಿಂದ ರಾಮಸಮುದ್ರದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ವಚ್ಛಗೊಳಿಸಿ, ಮಾಲಾರ್ಪಣೆ

ಚಾಮರಾಜನಗರ:  ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಜಿಲ್ಲಾ  ಬಿಜೆಪಿ ಎಸ್ ಸಿ ಮೋರ್ಚಾದ ವತಿಯಿಂದ ರಾಮಸಮುದ್ರದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ಸ್ವಚ್ಛಗೊಳಿಸಿ, ಮಾಲಾರ್ಪಣೆ ಮಾಡಿ ಸಿಹಿ ವಿತರಿಸಿ ಗೌರವ ನಮನ ಸಲ್ಲಿಸಲಾಯಿತು.
ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷ ನವೀನ್ ಮೌರ್ಯ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಶ್ರಮದಾನ ಮೂಲಕ
ಅಂಬೇಡ್ಕರ್ ಪ್ರತಿಮೆ ಸ್ವಚ್ಛಗೊಳಿಸಿ, ಮಾಲಾರ್ಪಣೆ ಮಾಡಿ ಅಂಬೇಡ್ಕರ್ ಸ್ಮರಣೆ ಮಾಡಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷ ನವೀನ್ ಮೌರ್ಯ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಶಯದಂತೆ ಸಂವಿಧಾನ ಶಿಲ್ಪಿ, ವಿಶ್ವರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ವಿವಿಧ ಸೇವಾ ಕಾರ್ಯಗಳ ಮೂಲಕ ಹಮ್ಮಿಕೊಳ್ಳಲಾಗಿದ್ದು, ಅದರಂತೆ ರಾಮಸಮುದ್ರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಯನ್ನು ಸ್ವಚ್ಚಗೊಳಿಸಿ, ಮಾಲಾರ್ಪಣೆ ಮಾಡಿ ಸಿಹಿ ಹಂಚುವ ಮೂಲಕ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷ ಸುರೇಶ್, ಮಾಜಿ ಸದಸ್ಯೆ ಕುಮುದಾ ಕೇಶವಮೂರ್ತಿ, ಬಿಜೆಪಿ ಎಸ್ ಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಸಮುದ್ರ ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಜಿಲ್ಲಾ ಕಾರ್ಯ ದರ್ಶಿ ಮೂಡಹಳ್ಳಿ ಮೂರ್ತಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಮುಖಂಡರಾದ ಕೋಡಿಉಗನೆ ಮಂಜು,  ನಗರ ಮಂಡಲ ಕಾರ್ಯದರ್ಶಿ ಗಳಾದ ಕೂಸಣ್ಣ , ಭಾಸ್ಕರ್,   ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯಕುಮಾರ್,  ಎಸ್ ಸಿ ಮೋರ್ಚಾದ ಕಾರ್ಯದರ್ಶಿ ಹೇಮಂತ್,  ನಗರ ಮಂಡಲ ಅಧ್ಯಕ್ಷ ಪರಶಿವಯ್ಯ, ಕಾರ್ಯದರ್ಶಿ ಬಿ.ರಾಜಪ್ಪ, ಮುಖಂಡರಾದ ಡ್ರೈವರ್ ಮಹದೇವು,
ಮುತ್ತಿಗೆ ಮೂರ್ತಿ, ವೇಣುಗೋಪಾಲ, ಶುಭೋದಯ ಸಿದ್ದರಾಜು, ಇತರರು ಹಾಜರಿದ್ದರು.

Leave a Reply

Your email address will not be published. Required fields are marked *