- ಚಾಮರಾಜನಗರ ಜಿಲ್ಲೆಯಿಂದ 500ಕ್ಕೂ ಹೆಚ್ಚು ಮುಖಂಡರು ಭಾಗವಹಿಸಲಿದ್ದಾರೆ.
- ಮೀಸಲಾತಿ ಹೆಚ್ಚಳ ತಡೆಯಾಜ್ಞೆ ತೆರವುಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ ಆರೋಪ
ಚಾಮರಾಜನಗರ : ಬಿಜೆಪಿ ಎಸ್‌ಟಿ ಮೋರ್ಚಾವು ಸಂವಿಧಾನ ಬದ್ಧ ಶೇ.7 ರಷ್ಟು ಎಸ್‌ಟಿ ಮೀಸಲಾತಿ ಜಾರಿಗೆ ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಮೈಸೂರಿನ ಬಲ್ಲಾಳ್ ಸರ್ಕಲ್ ಸಮೀಪದ ನಿತ್ಯೋತ್ಸವ ಕಲ್ಯಾಣ ಮಂಟಪದಲ್ಲಿ ಜು. 7 ರಂದು ಹಮ್ಮಿಕೊಂಡಿದೆ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ. ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ವಿರೋಧಿಸಿ ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದರು ಅದನ್ನು ತೆರವುಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಹಿಂದಿನ ಬಿಜೆಪಿ ಸರ್ಕಾರ ಎಸ್‌ಟಿಗೆ ಶೇ. 3ರಿಂದ ಶೇ. 7 ರಷ್ಟು ಮೀಸಲಾತಿ ಹೆಚ್ಚಳ ಮಾಡಿದೆ. ಅದರಂತೆ 4 ಸಾವಿರದಷ್ಟು ಹುದ್ದೆಗಳು ಸಿಗಬೇಕಾಗಿದೆ. ಜನಾಂಗದ ಅನೇಕರಿಗೆ ಕೆಎಎಸ್, ಐಪಿಎಸ್ ಸೇರಿದಂತೆ ಉನ್ನತವಾದ ದೊಡ್ಡದೊಡ್ಡ ಹುದ್ದೆಗಳು ಕೂಡ ಸಿಗಬೇಕಿದೆ. ಶೇ. 3 ರಷ್ಟು ಮೀಸಲಾತಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಿದರೆ ಸಮುದಾಯಕ್ಕೆ ಅನ್ಯಾಯ ಆಗುತ್ತದೆ, ಅದೇ ರೀತಿ ಸಮುದಾಯ ಮಕ್ಕಳ ಶಿಕ್ಷಣದಲ್ಲೂ ಪದವಿ, ಇಂಜಿನಿಯರ್, ಮೆಡಿಕಲ್ ಶೀಟ್‌ಗಳಲ್ಲೂ ಅನ್ಯಾಯ ಆಗಲಿದೆ. ಯಾವುದೇ ಸಮುದಾಯ ಮುಖ್ಯವಾಹಿನಿಗೆ ಬರಬೇಕು ಎಂದರೆ. ಶಿಕ್ಷಣ ಮುಖ್ಯವಾಗಿದೆ ಎಂದರು.
ಸಂವಿಧಾನ ಬದ್ಧ ಶೇ.7 ಎಸ್‌ಟಿ ಮೀಸಲಾತಿ ಜಾರಿಗೆ ಒತ್ತಾಯಿಸಿ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಪ್ರತಿ ಜಿಲ್ಲೆಯಲ್ಲೂ ಮಾಡಲಾಗುತ್ತಿದ್ದು, ಈಗಾಗಲೇ ದಾವಣಗೆರೆ, ಹೊಸಪೇಟೆ ಇತರೆ ಜಿಲ್ಲೆಗಳಲ್ಲಿ ಸಮಾವೇಶಗಳು ಯಶಸ್ವಿಯಾಗಿದ್ದು, ಜು. 7 ರಂದು ಮೈಸೂರಿನಲ್ಲಿ ಚಾಮರಾಜನಗರ, ಮೈಸೂರು ಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದೆ ಈ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿಕೊಡಬೇಕು ಎಂದು ರಾಮಚಂದ್ರ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಎಸ್ .ಟಿ. ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಸುಂದರ್, ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹಾಜರಿದ್ದರು.