- ರಾಜ್ಯ ಸರ್ಕಾರ, ಸಚಿವ ಬಿ. ನಾಗೇಂದ್ರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ
ಚಾಮರಾಜನಗರ: ಸಚಿವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದಲ್ಲಿ ಧರಣಿ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ರಾಜ್ಯ ಸರ್ಕಾರ ಹಾಗೂ ಸಚಿವ ಬಿ. ನಾಗೇಂದ್ರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ 187 ಕೋಟಿ. ರೂ. ಭ್ರಷ್ಟಾಚಾರವಾಗಿರುವ ಆರೋಪ ಹೊತ್ತಿರುವ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ವರ್ಗಾವಣೆ ಮಾಡಿ, ಲೂಟಿ ಮಾಡುವ ಮೂಲಕ ಜನರಿಗೆ ಅನ್ಯಾಯ ಮಾಡಿದ್ದರು. ಈ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿತ್ತು. ಈ ಸಂಬಂಧ ಇ ಡಿ ಅಧಿಕಾರಿಗಳು ಜಾರ್ಜಶೀಟ್ ಕೂಡಾ ಸಲ್ಲಿಸಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ನಾಗೇಂದ್ರ ಅವರನ್ನು ಎ1 ಆರೋಪಿ ಎಂದು ಉಲ್ಲೇಖ ಮಾಡಿದ್ದಾರೆ. ಆದ್ದರಿಂದ ಅವರನ್ನು ಸಚಿವ ಸಂಪುಟದಿಂದ ಕೆಳಗಿಳಿಸಬೇಕು ಎಂದು ಆಗ್ರಹ ಮಾಡಿದರು.
ಭ್ರಷ್ಟಾಚಾರದ ಆರೋಪ ಹೊತ್ತಿರುವ ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸದೇ ಹೋದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ,.ಬಿ.ನಾಗೇಂದ್ರ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಣವನ್ನು ಚೆಕ್ ಮೂಲಕ ಡ್ರಾ ಮಾಡಿ ಬೇರೆ ಬೇರೆ ಖಾತೆಗೆ ವರ್ಗಾವಣೆ ಮಾಡಿರುವುದು ಗೊತ್ತಾಗಿ ಅದು ಸಿಬಿಐ ವಿಚಾರಣೆ ನಡೆಯುತ್ತಿದೆ. ಜೈಲಿನಿಂದ ಬೇಲ್‌ನಿಂದ ಆಚೆ ಬಂದಿದ್ದಾರೆ. ಕಾನೂನಡಿಯಲ್ಲಿ ಅವರೊಬ್ಬರು ಕ್ರಿಮಿನಲ್ ಆಗಿದ್ದಾರೆ ಇಂತಹ ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯನ್ನು ಮಂತ್ರಿ ಮಾಡಿರುವುದು ಸಂವಿಧಾನಕ್ಕೆ ಮಾಡಿದ ದ್ರೋಹ, ಮೋಸವಾಗಿದೆ. ಆಗಾಗಿ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಭಂಡ ಸರ್ಕಾರ ಅನ್ನುವುದಕ್ಕೆ ಇದೆಲ್ಲವೂ ನಿದರ್ಶನವಾಗಿದೆ ಎಂದರು.
ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ, ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಅನೇಕ ಭ್ರಷ್ಟಾಚಾರ ಹೊತ್ತಿರುವ ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಿದ್ದಾರೆ. ಸಚಿವ ನಾಗೇಂದ್ರ 187 ಕೋಟಿ ಹಗರಣದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಅವರನ್ನು ಮತ್ತೆ ಮಂತ್ರಿ ಮಾಡಿದ್ದಾರೆ. ಇವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್‌ಸಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೃಷಭೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ವಕ್ತಾರ ಮನೋಜ್ ಪಟೇಲ್, ಎಸ್.ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಜಯಸುಂದರ್,ರಾಷ್ಟ್ರೀಯ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷರಾದ ಅರ್.ಸುಂದರ್, ಬಾಲಸುಬ್ರಹ್ಮಣ್ಯಂ, ಮುಖಂಡರಾದ ಮಲ್ಲೇಶ್, ಸಿ.ಎನ್.ಬಾಲರಾಜು, ಜಿಲ್ಲಾ ಕಾರ್ಯದರ್ಶಿ ಮೂಡಹಳ್ಲಿ ಮೂರ್ತಿ, ಮೋರ್ಚಾದ ಅಧ್ಯಕ್ಷರಾದ ಚಂದ್ರಶೇಖರ್, ನವೀನ್ ಮೌರ್ಯ, ಸೂರ್ಯಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ರಾಮಸಮುದ್ರ ಶಿವಣ್ಣ, ಆನಂದ್ ಭಗೀರಥ, ಸಾಗಡೆ ಗುರುಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ನಟರಾಜು, ಬುಲೆಟ್ ಚಂದ್ರು, ನಗ ರ ಮಂಡಲ ಅಧ್ಯಕ್ಷ ಶಿವರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್ , ಪ್ರಧಾನ ಕಾರ್ಯದರ್ಶಿ ಗಳಾದ ಕೂಸಣ್ಣ, ಭಾಸ್ಕರ್, ಕಿರಣ್, ಕೃಷ್ಣ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಮಲೆಯೂರು ಕಮಲಮ್ಮ, ಕುಮಚಹಳ್ಳಿ ಪಾರ್ವತಿ, ಮಾರ್ಕೇಟ್ ಕುಮಾರ್, ಬಂಗಾರನಾಯಕ, ಶಿವಣ್ಣ, ಮಹದೇವಪ್ರಸಾದ್, ವೀರೇಂದ್ರ, ಶೇಷಪ್ಪ ಪಾಸ್ವಾನ್ ಇದ್ದರು.
