ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು :  ನಗರದಲ್ಲಿ ಬಿಜೆಪಿ ವಿಜಯೋತ್ಸವ

ಚಾಮರಾಜನಗರ:  ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ  ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಣೆ  ಮಾಡಲಾಯಿತು.
     ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಮುಖಂಡರು  ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ  ಬಿಜೆಪಿ, ನರೇಂದ್ರಮೋದಿ
ಪರ ಜೈಕಾರ ಕೂಗಿ ಸಂಭ್ರಮಿಸಿದರು.
   ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಪಿ.ವೃಷಬೇಂದ್ರಪ್ಪ ಮಾತನಾಡಿ,  ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರ ಹಿಡಿರುವುದು ತುಂಬಾ ಸಂತಸವಾಗಿದೆ.  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪರ ಆಡಳಿತ ಒಪ್ಪಿ ಜನತೆ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ಈ ಮೂರು ರಾಜ್ಯ ಫಲಿತಾಂಶ ಕರ್ನಾಟಕ ರಾಜ್ಯದ ಮುಂದಿನ ಚುನಾವಣೆಯ ದಿಕ್ಸೂಚಿ ಯಾಗಿದೆ ಎಂದರು.
  ಯುವ ಮೋರ್ಚಾದ ಅಧ್ಯಕ್ಷ ಸೂರ್ಯಕುಮಾರ್ ಮಾತನಾಡಿ, ದೇಶದ ಜನ ಹಿಂದುತ್ವ ಕಡೆ ಸಾಗುತ್ತಿದ್ದಾರೆ ಎನ್ನುವುದಕ್ಕೆ ಪಂಚರಾಜ್ಯಗಳ ಚುನಾವಣಾ
ಫಲಿತಾಂಶ ಒಂದು ಸಾಕ್ಷಿಯಾಗಿದೆ. ಪಶ್ಚಿಮ ಬಂಗಾಳ ದಲ್ಲಿ ಮಮತ ಬ್ಯಾನರ್ಜಿ ವಿರುದ್ದ ಬಿಜೆಪಿಗೆ ದೊಡ್ಡ ಗೆಲುವು ಆಗಿದೆ ಅದೇ ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ.ತಮಿಳುನಾಡಿನಲ್ಲಿ ಹಿಂದುತ್ವದ ವಿರುದ್ದ ಡಿಎಂಕೆ ಸೋಲಿನ ರುಚಿ ತೋರಿಸಿದ್ದಾರೆ. ದೇಶದ ಜನರು ಸುಭದ್ರ ಆಡಳಿತ, ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದಾರೆ ಎಂದರು.
  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ನಗರ ಮಂಡಲ ಅಧ್ಯಕ್ಷ ಶಿವರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್,, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಎ.ಬಾಬು, ರಾಷ್ಟ್ರೀಯ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಬಾಲಸುಬ್ರಹ್ಮಣ್ಯಂ,  ಉಪಾಧ್ಯಕ್ಷ ಶಿವುವಿರಾಟ್, ಸಾಹಿತಿ ಮಂಜುಕೋಡಿಉಗನೆ,  
ಎಪಿಎಂಸಿ ಮಾಜಿ ಅಧ್ಯಕ್ಷ
ಮನೋಜ್ ಪಟೇಲ್, ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ಬಂಗಾರನಾಯಕ, ಶಿವಣ್ಣ, ಮಂಜು, ಕೂಸಣ್ಣ, ಮಹೇಶ್, ಕೇಬಲ್ ರಂಗಸ್ವಾಮಿ, ಶೇಷಪ್ಪಾಪಾಸ್ವಾನ್, ವಿ.ಶ್ರೀನಿವಾಸಪ್ರಸಾದ್, ಸೋಮವಾರಪೇಟೆ ಗುರು, ಪೋಟೋಕೃಷ್ಣ, ಭೋಗಾಪುರ ಕುಮಾರ್, ಕೃಷ್ಣಪ್ಪ, ಪ್ರವೀಣ್ ನಾಯಕ್, ಕೃಷ್ಣಕುಮಾರ್, ಚಂದ್ರಶೇಖರ್, ಪರಶಿವು ಹಾಜರಿದ್ದರು.

Leave a Reply

Your email address will not be published. Required fields are marked *