ಹಿಂದುಳಿದ ವರ್ಗಗಳ ನಾಯಕ ಮೋದಿ ಜನಪ್ರಿಯತೆ ಸಹಿಸದ ಕಾಂಗ್ರೆಸ್
ಚಾಮರಾಜನಗರ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿಕೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೂರ್ಯ ಬಾಲರಾಜ್ ನೇತೃತ್ವದಲ್ಲಿ ಸಮಾವೇಶಗೊಂಡ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶಿವರಾಜ್ ತಂಗಡಗಿ ಭಾವಚಿತ್ರ ಹಾಗೂ, ಬಿಜೆಪಿ ಬಾವುಟಗಳನ್ನು ಹಿಡಿದು ಮೋದಿ ಪರ ಜೈಕಾರ ಕೂಗುತ್ತಾ ಭುವನೇಶ್ವರಿ ವೃತ್ತ ತಲುಪಿದರು. ಅಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ, ಶಿವರಾಜ್ ತಂಗಡಗಿ ವಿರುದ್ದ ಘೋಷಣೆಗಳನ್ನು ಕೂಗಿದರು. ತಂಗಡಗಿ ಭಾವಚಿತ್ರಕ್ಕೆ ಬೆಂಕಿ ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದು ಫೆಕ್ಸ್ ಅನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಕೆಲ ಕಾಲ ಪ್ರತಿಭಟನೆ ನಡೆಸಿದರು.
ಇದಕ್ಕು ಮುನ್ನಾ ಮಾತನಾಡಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೂರ್ಯ ಬಾಲರಾಜ್, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗು ವಿಶ್ವ ವಿಖ್ಯಾತಿಯನ್ನು ಕಾಂಗ್ರೆಸ್‍ನವರು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ಸಿಗರು ಸಂಸ್ಕøತಿ ಹೀನ ಪದಗಳನ್ನು ಬಳಕೆ ಮಾಡಿ, ಪ್ರಧಾನಿಗೆ ಅಪಮಾನ ಮಾಡಿದ್ದಾರೆ. ಇದು ಕೇವಲ ಸಚಿವ ಶಿವರಾಜ್ ತಂಗಡಗಿಯಿಂದ ಬಂದ ಹೇಳಿಕೆಯಲ್ಲ. ಮೋದಿ ಎನ್ನುವವÀರ ಕಪಾಳಕ್ಕೆ ಹೊಡೆಯಿರಿ ಎಂದು ಹೇಳುವ ಮೂಲಕ ಕಾಂಗ್ರೆಸ್‍ನವರ ಮನಸ್ಥಿತಿ ಮತ್ತು ಹತಾಶೆಯನ್ನು ತೋರ್ಪಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ಸಚಿವ ಶಿವರಾಜ ತಂಗಡಗಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆದುಕೊಳ್ಳಬೇಕು. ಸಚಿವರು ದೇಶದ ಜನರ ಕ್ಷಮೆ ಯಾಚಿಸಬೇಕು. ಅತ್ಯಂತ ಹಿಂದುಳಿದ ಸಮುದಾಯದಿಂದ ಬಂದ ಪ್ರಧಾನಿ ಮೋದಿ ಅವರು ಬಹಳ ಕಷ್ಟು ಪಟ್ಟು ಟೀ ಮಾಡುತ್ತಾ ದೇಶದ ಭವಿಷ್ಯಕ್ಕಾಗಿ ಪ್ರಧಾನಿಯಾಗಿದ್ಧಾರೆ. ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಅಭಿವೃದ್ದಿ ಕಾರ್ಯಕ್ರಮಗಳನ್ನು ಸಹಿಸದ ಕಾಂಗ್ರೆಸ್‍ನವರು ಇಲ್ಲಸಲ್ಲ ಸುಳ್ಳುಗಳನ್ನು ಹೇಳುತ್ತಿದ್ದಾರೆ. ದೇಶದ್ಯಂತ ಯುವಕರಿಗೆ ಸ್ವಯಂ ಉದ್ಯೋಗ ಸೃಷ್ಠಿ ಮಾಡುವ ಜೊತೆಗೆ ಅವರನ್ನು ಸ್ವಾವಲಂಬಿಗಳಾಗಿ ಬದುಕುವ ದಾರಿಯನ್ನು ಪ್ರಧಾನಿ ಮೋದಿ ಅವರು ಕಲ್ಪಿಸಿಕೊಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ, ಸೇರಿದಂತೆ ಪ್ರತಿ ಹಳ್ಳಿಹಳ್ಳಿಗೂ ಸಹ ನಲ್ಲಿ ಮೂಲಕ ಶುದ್ದ ಜಲವನ್ನು ನೀಡಿದ್ದಾರೆ. ಪ್ರತಿ ಮನೆ ಮನೆಗೆ ಜೀರೂ ಬ್ಯಾಂಕ್ ಖಾತೆಗಳನ್ನು ತೆರೆದು ಅವರ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡಿ ಯಾವುದೇ ರೀತಿ ಭ್ರಷ್ಟಚಾರಕ್ಕೆ ಅಸ್ಪದ ನೀಡದೇ ಅಭಿವೃದ್ದಿಪರ ಆಡಳಿತ ವನ್ನು ನೀಡಿದ್ದಾರೆ. ಇಂಥ ಶುದ್ದ ವಾದ ಆಡಳಿತವನ್ನು ನೀಡಿರುವ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೇಂದು ಯುವ ಸಮುದಾಯ ಕಾತುರವಾಗಿದೆ. ಹೀಗಾಗಿ ಹೋದ ಕಡೆಯಲ್ಲ. ಮೋದಿ, ಮೋದಿ ಮೋದಿ ಎಂದು ಕೂಗುತ್ತಿದ್ದಾರೆ. ಇದನ್ನು ಸಹಿಸದ ರಾಜ್ಯದ ಕಾಂಗ್ರೆಸ್ ಮುಖಂಡರು ಇಂಥ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ್, ಸಾಗಡೆ ಗುರು, ಯಳಂದೂರು ರುದ್ರ, ಪ್ರಮೋದ್, ಕೋಟಂಬಳ್ಳಿ ಕುಮಾರ್,ಕೊತ್ತಲವಾಡಿ ಮಹದೇವಸ್ವಾಮಿ, ಗುರುಪ್ರಸಾದ್, ಪ್ರವೀಣ್, ಬುಲೆಟ್ ಚಂದ್ರು, ಮಹದೇವಪ್ರಸಾದ್, ಮಹೇಶ್‍ನಾಯಕ, ಬೂದಂಬಳ್ಳಿ ರಾಜೇಶ್, ಕೇಬಲ್ ರಂಗಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ವಿರಾಟ್ ಶಿವು, ಜಿಲ್ಲಾ ಸಹ ವಕ್ತಾರ ಮಂಜುನಾಥ್, ಕೂಸಣ್ಣ ಮೊದಲಾದವರು ಇದ್ದರು.