ಚಾಮರಾಜನಗರದಲ್ಲಿ ಬಿಜೆಪಿ ಯುವಮೋರ್ಚಾದಿಂದ ತಿರಂಗಾಯಾತ್ರೆ

  • ಮೊಳಗಿದ ವಂದೇಮಾತರಂ, ಭಾರತ್ ಮಾತಾಕೀ ಘೋಷಣೆ

ಚಾಮರಾಜನಗರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ವತಿಯಿಂದ ತಿರಂಗಾಯಾತ್ರೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು ತಿರಂಗಾಯಾತ್ರೆಗೆ ಚಾಲನೆ ನೀಡಿದರು. ತಿರಂಗಾಯಾತ್ರೆಯು ದೊಡ್ಡಂಗಡಿ ಬೀದಿ, ಚಿಕ್ಕಂಗಂಡಿ, ಸಂತೇಮರಹಳ್ಳಿ ವೃತ್ತ, ಭೌವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ರಾಮಸಮುದ್ರದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಹುಕ್ಕಳಿ ಬಳಿಗೆ ತೆರಳಿ ಮಾಲಾರ್ಪಣೆ ಮಾಡಿ ತಿರಂಗಾಯಾತ್ರೆ ಮುಕ್ತಾಯವಾಯಿತು.
ಬಿಜೆಪಿ ಮುಖಂಡರು, ಕಾರ್ಯಕರ್ತರು ವಂದೇ ಮಾತರಂ ಘೋಷಣೆ ಮೊಳಗಿಸುತ್ತಾ ತಿರಂಗಾಯಾತ್ರೆ ನಡೆಸಿದರು.
ಓಬಿಸಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ನೂರೊಂದುಶೆಟ್ಟಿ ಮಾತನಾಡಿ:ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಲಿದಾನ ಮಾಡಿದ ರಾಷ್ಟ್ರಭಕ್ತರಿಗೆ ಪ್ರಣಾಮ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ. ಮನೆ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಭಕ್ತಿಯನ್ನು ಪ್ರದರ್ಶಿಸೋಣ’ ಎಂದರು.
  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ ಮಾತನಾಡಿ, ಹೆಮ್ಮೆಯ ದೇಶದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ ಅವರ ಆದೇಶ ಮೇರೆಗೆ ಜಿಲ್ಲಾ ಯುವ ಮೋರ್ಚಾದ ವತಿಯಿಂದ ತಿರಂಗಾಯಾತ್ರೆ ಹಮ್ಮಿಕೊಳ್ಳಲಾಗಿದೆ.ದೇಶದ ಸ್ವಾತಂತ್ರಕ್ಕಾಗಿ ದುಡಿದವರ ತ್ಯಾಗದ ಫಲವಾಗಿ ಇಂದು ನಾವೆಲ್ಲರೂ ಈ ಸಂಭ್ರಮವನ್ನು ಅನುಭವಿಸುತ್ತಿದ್ದೇವೆ. ಹಿರಿಯರ ಹೋರಾಟವನ್ನು ಸ್ಮರಿಸುವುದು ನಮ್ಮ ಜವಾಬ್ದಾರಿ. ಯುವಜನರಲ್ಲಿ ದೇಶದ ಬಗ್ಗೆ ಪ್ರೀತಿ, ಅಭಿಮಾನ, ಗೌರವವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ’ ಎಂದರು.
   ತಿರಂಗಾಯಾತ್ರೆಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಮನೋಜ್‌ಪಟೇಲ್, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯ ಬಾಲರಾಜು, ಪ್ರಧಾನ ಕಾರ್ಯದರ್ಶಿ ಆನಂದ್‌ಭಗೀರಥ್, ನಗರ ಮಂಡಲ ಅಧ್ಯಕ್ಷ ಪ್ರವೀಣ್, ಗ್ರಾಮಾಂತರ ಮಂಡಲ ಅಧ್ಯಕ್ಷ ಪ್ರದೀಪ್, ಉತ್ತುವಳ್ಳಿ ಆನಂದ್
ನಗರಮಂಡಲ ಅಧ್ಯಕ್ಷ ಶಿವರಾಜ್, ಎಸ್‌ಟಿ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್‌ಚಂದ್ರು, ಜಿಲ್ಲಾ ಕಾರ್ಯದರ್ಶಿ ಗಳಾದ ನಟರಾಜು, ಸುಂದರ್ ರಾಜ್, ಕಚೇರಿ ಕಾರ್ಯದರ್ಶಿ ಪಿ.ರಂಗಸ್ವಾಮಿ, ರಾಮಸಮುದ್ರ ವೇಣುಗೋಪಾಲ್, ವೀರೇಂದ್ರ, ರಾಮಸಮುದ್ರ ಶಿವಣ್ಣ, ಮಾರ್ಕೇಟ್ ಕುಮಾರ್, ಕೂಸಣ್ಣ, ಮಂಜುನಾಥ್, ಸುಂದ್ರಪ್ಪ, ಶಿವಣ್ಣ, ಆನಂದ್, ಮಹೇಶ್, ರಾಜಪ್ಪ, ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *