ಪುನೀತ್ ಜನ್ಮದಿನಾಚರಣೆ ಅಂಗವಾಗಿ ಭಗತ್ ಸಿಂಗ್ ಯುವಸೇನೆ ವತಿಯಿಂದ ಪುಸ್ತಕ ವಿತರಣೆ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಜನ್ಮದಿನಾಚರಣೆ ಅಂಗವಾಗಿ ಭಗತ್ ಸಿಂಗ್ ಯುವಸೇನೆ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ದಿವಂಗತ ಡಾಕ್ಟರ್ ಪುನೀತ್ ರಾಜಕುಮಾರ್ ಅವರ 49ನೇ ಜನ್ಮದಿನಾಚರಣೆಯನ್ನು ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.

ಭಗತ್ ಸಿಂಗ್ ಯುವ ಸೇನೆ ಅಧ್ಯಕ್ಷ ಕಾಂತರಾಜು ಮಾತನಾಡಿ, ದಿ.ಪುನೀತ್ ರಾಜಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಆಚರಿಸಲಾಗುತ್ತಿದೆ. ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಸಾರ್ವಜನಿಕ ಕ್ಷೇತ್ರದಲ್ಲಿ ಯಾರಿಗೂ ತಿಳಿಯದ ಹಾಗೆ ಅಪಾರ ಸೇವೆಯನ್ನು ಸಲ್ಲಿಸಿದ್ದು, ಸಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಅವರ ಆದರ್ಶನಿಯವಾದ ಬದುಕನ್ನು ಹಾಗೂ ಸೇವಾ ಮನೋಭಾವನೆಯನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಾಗೇಶ್ (ಅಪ್ಪು), ಶಿವು, ಸಿದ್ದರಾಜು, ಪ್ರಜ್ವಲ್, ಮನು ಇತರರು ಇದ್ದರು.

Leave a Reply

Your email address will not be published. Required fields are marked *