ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ

ಪುಸ್ತಕ ಮೇಳದಲ್ಲಿ ಭಾಗವಹಿಸಲು ನಾಡಿನ ಪ್ರಕಾಶಕರು/ ಮಾರಾಟಗಾರರಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27  ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ವನ್ನು ಹಮ್ಮಿಕೊಳ್ಳಲಾಗಿದೆ.

ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು/ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಂದ ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ ಸೈಟ್  www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸಬೇಕು.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಫೆಬ್ರವರಿ 12ರ ಸಂಜೆ 5 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳಾದ ಎಂ.ಕೆ. ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *