ಮಲೆ ಮಹದೇಶ್ವರ ಬೆಟ್ಟದಲ್ಲಿ ಯಶಸ್ವಿಯಾಗಿ ನಡೆದ ಗಡಿನಾಡ ಸಾಂಸ್ಕೃತಿಕ ಉತ್ಸವ

ಚಾಮರಾಜನಗರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರ, ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹನೂರು ತಾಲೂಕು ಆಡಳಿತ ಸಹಯೋಗದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡ ಸಾಂಸ್ಕøತಿಕ ಉತ್ಸವ ಕಾರ್ಯಕ್ರಮ ಇಂದು ನಡೆಯಿತು. 

ಮಲೆಮಹದೇಶ್ವರ ಬೆಟ್ಟದ ದೇವಾಲಯ ಪಕ್ಕದ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಗಡಿನಾಡ ಸಾಂಸ್ಕøತಿಕ ಉತ್ಸವ ಕಾರ್ಯಕ್ರಮವು ಶಾಸಕರಾದ ಎಂ.ಆರ್. ಮಂಜುನಾಥ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹದೇಶ್ವರ ಬೆಟ್ಟ ಗ್ರಾಮಪಂಚಾಯತಿ ಅಧ್ಯಕ್ಷರಾದ ಅರ್ಚನಾ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ್ ಮತ್ತೀಹಳ್ಳಿ ಭಾಗವಹಿಸಿದ್ದರು. 

ಹನೂರು ತಾಲ್ಲೂಕು ತಹಶೀಲ್ದಾರ್ ಕೆ.ಎನ್. ಚೈತ್ರಾ, ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಕಾರ್ಯದರ್ಶಿಗಳಾದ ಎ. ರಘು, ಕನ್ನಡ ಸಾಹಿತ್ಯ ಪರಿಷತ ತಾಲ್ಲೂಕು ಅಧ್ಯಕ್ಷರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರ ಹಾಗೂ ಸದಸ್ಯರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ, ಎಂ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ಗಡಿ ಪ್ರಾಧಿಕಾರದ ಅನುದಾನದಲ್ಲಿ ನೀಡಿದ ಹನೂರು ತಾಲೂಕಿನ ಕೊಂಬುಡಿಕ್ಕಿ ಗ್ರಾಮದ ಸರ್ಕಾರಿ ಶಾಲೆಯ ಸ್ಮಾರ್ಟ್ ಬೋರ್ಡ್ ಪ್ಯಾನೆಲ್ ವೀಕ್ಷಣೆ ಮಾಡಲಾಯಿತು.

Leave a Reply

Your email address will not be published. Required fields are marked *