ರಾಜ್ಯದ ಆರ್ಥಿಕ ಸ್ಥಿತಿ, ಅಭಿವೃದ್ಧಿ ದಿಕ್ಕು ನಿರ್ಧರಿಸುವ ಮಹತ್ವದ ಬಜೆಟ್ : ಉಮೇಶ್

  • ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ
  • ಚಾಮರಾಜನಗರ ತಾಲೂಕು ಕುರುಬರ ಸಂಘದಿಂದ  ಸಂಭ್ರಮಾಚರಣೆ
  • ಸಿದ್ದರಾಮಯ್ಯ ಅವರ ಕಟೌಟ್ ಕ್ಷೀರಾಭಿಷೇಕ, ಸಾರ್ವಜನಿಕರಿಗೆ ಉಪಾಹಾರ ವ್ಯವಸ್ಥೆ

ಚಾಮರಾಜನಗರ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿಂದು ದಾಖಲೆಯ 17ನೇ ಬಜೆಟ್ ಮಂಡಿಸಿದ ಪ್ರಯುಕ್ತ ತಾಲೂಕು ಕುರುಬರ ಸಂಘದ ವತಿಯಿಂದ ನಗರದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
ನಗರದ ಜೋಡಿರಸ್ತೆಯಲ್ಲಿ ತಾಲೂಕು ಕುರುಬರ ಸಂಘದ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರ ಕಟೌಟ್  ಕ್ಷೀರಾಭಿಷೇಕ ಮಾಡಿ, ಸಾರ್ವಜನಿಕರಿಗೆ ಉಪಹಾರ ವ್ಯವಸ್ಥೆ ಮಾಡುವ ಮೂಲಕ ಸಿದ್ದರಾಮಯ್ಯ ಪರ ಜೈಕಾರ ಕೂಗಿ ಸಂಭ್ರಮಿಸಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕುರುಬರ ಸಂಘದ ತಾಲೂಕು ಅಧ್ಯಕ್ಷ ಉಮೇಶ್ ಎಸ್ ಪಿಕೆ ಮಾತನಾಡಿ,
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು
ವಿಧಾನಸಭೆಯಲ್ಲಿ ಮಂಡಿಸಿದ17ನೇ ಬಜೆಟ್, ರಾಜ್ಯದ ಇತಿಹಾಸದಲ್ಲೇ ದಾಖಲೆಯಾಗಿದ್ದು,ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾದ ದಾಖಲೆಗೆ ಜನವರಿಯಲ್ಲಿ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. 7 ವರ್ಷ 239 ದಿನಗಳ ಕಾಲ ಸಿಎಂ ಆಗಿದ್ದ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಹಿಂದಿಕ್ಕಿದ್ದಾರೆ. ಇದೀಗ ಬಜೆಟ್ ಮಂಡನೆಯಲ್ಲಿಯೂ ದಾಖಲೆ ನಿರ್ಮಿಸಿದ್ದಾರೆ ಇದು ತುಂಬಾ ಸಂತಸ ಉಂಟು ಮಾಡಿದ್ದು, ತಾಲೂಕು ಕುರುಬರ ಸಂಘದ ವತಿಯಿಂದ ಸಾರ್ವಜನಿಕ ಉಪಾಹಾರ ವ್ಯವಸ್ಥೆ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ  ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ಪಿ.ನಾಗರಾಜು, ನಿರ್ದೇಶಕ ರಾದ ಶಿವಕುಮಾರ್, ನಟರಾಜು, ಮಹದೇವು, ಜಿಲ್ಲಾ ಘಟಕ ಕಾರ್ಯದರ್ಶಿ ಶಿವಲಿಂಗೇಗೌಡ, ಅಮಚವಾಡಿ ಕುಮಾರ್, ನಗರಸಭಾ ಮಾಜಿ ಸದಸ್ಯ ಕರಿನಂಜನಪುರ ಸ್ವಾಮಿ, ತಾ.ಪಂ.ಮಾಜಿ ಸದಸ್ಯ ನಂಜುಂಡಸ್ವಾಮಿ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *