ಚಾಮರಾಜನಗರ: ತಾಲೂಕಿನ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶ, ಪ್ರೇರಣಾ ಕೋಶ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ (IQAC) ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ
ಇವರ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನೋಂದಣಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಯಿತು.
ಚಾಮರಾಜನಗರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವೈಯಕ್ತಿಕ ಸಮಾಲೋಚಕರು ಹಾಗೂ ತರಬೇತುದಾರರಾದ ಕೆ.ಜಿ. ಮಹದೇವಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಸರ್ಕಾರದ ಉದ್ಯೋಗ ನೋಂದಣಿ ಪ್ರಕ್ರಿಯೆ ಮತ್ತು ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯೋಗಕ್ಕಾಗಿ ಕಾಯುವುದಕ್ಕಿಂತ, ಉದ್ಯೋಗಕ್ಕೆ ತಕ್ಕಂತೆ ನಮ್ಮನ್ನು ನಾವು ಸಿದ್ಧಪಡಿಸಿಕೊಳ್ಳುವುದು ಮುಖ್ಯ. ಪದವಿ ಹಂತದಲ್ಲೇ ವಿದ್ಯಾರ್ಥಿಗಳು ವೃತ್ತಿಜೀವನದ ಸ್ಪಷ್ಟ ಗುರಿ ರೂಪಿಸಿಕೊಳ್ಳುವಂತೆ ಪ್ರೇರೇಪಿಸಿದರು.
ಕಾಲೇಜಿನ ಪ್ಲೇಸ್‌ಮೆಂಟ್ ಅಧಿಕಾರಿ ಗಿರೀಶ್ ಟಿ. ಆರ್ ವಿದ್ಯಾರ್ಥಿ ಜೀವನದಲ್ಲಿ ಪದವಿ ಪಡೆಯುವುದು ಎಷ್ಟು ಮುಖ್ಯವೋ, ಅದಕ್ಕೆ ತಕ್ಕಂತೆ ಉದ್ಯೋಗಾವಕಾಶಗಳನ್ನು ಗುರುತಿಸುವುದು, ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಮತ್ತು ಸ್ಪರ್ಧಾತ್ಮಕ ಜಗತ್ತಿಗೆ ಸಿದ್ಧರಾಗುವುದು ಕೂಡ ಅಷ್ಟೇ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯೋಗಾವಕಾಶಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಯಿತು ಹಾಗೂ ಸ್ಥಳದಲ್ಲೇ ಉದ್ಯೋಗ ನೋಂದಣಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ( ಐಕ್ಯೂ ಎಸಿ) ಸಂಯೋಜಕ ರಂಗಸ್ವಾಮಿ ಆರ್, ಪ್ರಾಧ್ಯಾಪಕರಾದ ನಂಜುಂಡಯ್ಯ, ಡಾ. ರಮೇಶ್ ಬಾಬು, ಶಿವಕುಮಾರ್ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಜರಿದ್ದರು.
