19 ಉಪಸಮಿತಿಗಳಿಂದ ದಸರಾ ಅಂತಿಮ ಹಂತದ ಸಿದ್ಧತೆ-ಎಚ್.ಸಿ.ಮಹದೇವಪ್ಪಮೈಸೂರು: ಅಕ್ಟೋಬರ್ 03 ಬೆಳಗ್ಗೆ 9.15 ಗಂಟೆಯಿಂದ 9:45 ಗಂಟೆಯವರೆಗೆ ಚಾಮುಂಡಿ ಬೆಟ್ಟದಲ್ಲಿ ದಸರಾ…
Category: ಜಿಲ್ಲಾ ಸುದ್ದಿಗಳು
ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ: BJP-JDS ಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ
ಹೋರಾಟದಿಂದ ಬಂದಿದ್ದೇನೆ. ನಿಮ್ಮ ಷಡ್ಯಂತ್ರ ಸೋಲಿಸುತ್ತೇನೆ: BJP-JDS ಗೆ ಸಿಎಂ ನೇರ ಎಚ್ಚರಿಕೆ ಬೆಂಗಳೂರು: ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು…
ತೊಟ್ಟು ಕಳಚಿದ ಕಾಯಿ
ತೊಟ್ಟು ಕಳಚಿದ ಕಾಯಿಹಣ್ಣಾಗಲುಬಹುದು; ಬಲಿತಿದ್ದರೆತೊಟ್ಟ ಹಂಭಾರವ ತೊಟ್ಟುತಡೆಯಲುಬಹುದು;ಬಲವಿದ್ದರೆಕಾಯಿಯ ಹಂ-ಭಾರಕೆ ಹೆಗಲಾಗುವ ಸ್ನೇಹತಾಯಿಯ ಸಂಪರ್ಕಕ್ಕೆ ಬಂಧವಾಗುತದೆಕಾಯಿಯ ಭಾರಕೆ ತೊಟ್ಟು ಕಳಚದಂತೆ.ಕಾಯಿಯ ಸುತ್ತಿ ಜಗ್ಗುವ…
ಮಾವುತರು ಮತ್ತು ಕಾವಾಡಿಗರ ಕುಟುಂಬದವರ ಜೊತೆ ಕುಳಿತು ಊಟ ಸವಿದ ಸಚಿವ ಹೆಚ್.ಸಿ.ಮಹದೇವಪ್ಪ
ಮೈಸೂರು:ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ…
ಮೈಸೂರು ದಸರಾ 2024 ಯುವ ಸಂಭ್ರಮ ವೆಬ್‍ಸೈಟ್ ಬಿಡುಗಡೆ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ಯುವ ಸಂಭ್ರಮದ ಪೆÇೀಸ್ಟರ್ ಬಿಡುಗಡೆ,…
ಶಿವಾಜಿ ಗಣೇಶನ್,ಪದ್ಮರಾಜ ದಂಡಾವತಿ, ಪೂರ್ಣಿಮಾ, ಕಾಟ್ಕರ್ ಸೇರಿ 5 ಜನ ಪತ್ರಕರ್ತರಿಗೆ ಟಿಎಸ್‍ಆರ್
ಹೊನ್ನಾಪುರ, ಪಾಲೆತ್ತಾಡಿ, ಕ್ರಾಂತಿ ಮಂಜುನಾಥ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ 2019 ರಿಂದ 2023 ರವರೆಗಿನ ಟಿಎಸ್‍ಆರ್ ಹಾಗೂ ಮೊಹರೆ…
ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆ ಬೃಹತ್ ಉದ್ಯಮವಾಗಿ ಬೆಳೆದಿದ್ದು ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ : ಹೆಚ್ ಡಿ ಕುಮಾರಸ್ವಾಮಿ
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸರ್ಕಾರದ ಮಾನ್ಯ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು. ಇಂದು ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ “ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ 27 ರಾಜ್ಯಗಳ ರೈತರು ತಮ್ಮನ್ನು ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಮೈಸೂರು ಭಾಗದಲ್ಲಿ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಹೆಚ್ಚು ಎಂದರು. ಕರ್ನಾಟಕದಲ್ಲಿ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಚೀನಾದಲ್ಲಿ ಹೆಚ್ಚಿನ ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ರೇಷ್ಮೆ ಬೆಲೆಯಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರೇಷ್ಮೆ ಬೆಳೆಯು ಕಳೆದ ಎರಡು ಮೂರು ವರ್ಷಗಳಿಂದ ಉತ್ತಮವಾದ ಬೆಲೆ ಸಿಗುತ್ತಿದ್ದು, ರೇಷ್ಮೆ ಬೆಳೆಗಾರರು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಕೇಂದ್ರ ಸರ್ಕಾರವು 1.52 ಲಕ್ಷ ಕೋಟಿ ಹಣವನ್ನು ಕೃಷಿ ಕ್ಷೇತ್ರಕ್ಕೆ ನೀಡಲಾಗಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ರೈತರ ಅಭಿವೃದ್ಧಿಗೆ ಸಂಬoದಿಸಿದ ಚರ್ಚೆಗಳು ನಡೆಯುತ್ತವೆ. ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ರೈತರು ಆತ್ಮ ವಿಶ್ವಾಸದಿಂದ ಜೀವನ ನಡೆಸಬೇಕು ಈ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸುತ್ತೇವೆ ಎಂದು ತಿಳಿಸಿದರು. ಶ್ಯಾಮ್ ಪ್ರಕಾಶ್ ಮುಖರ್ಜಿ ಅವರ ದೂರ ದೃಷ್ಟಿಯಿಂದ ಕೇಂದ್ರೀಯ ರೇಷ್ಮೆ ಮಂಡಳಿ ಪ್ರಾರಂಭವಾಯಿತು. ಈ ಮಂಡಳಿಯ ಪ್ರಾರಂಭದಿoದ ರೇಷ್ಮೆ ಬೆಲೆಯಲ್ಲಿ ಹಲವು ಆವಿಷ್ಕಾರ ಆಗಿದೆ ಎಂದರು. ಜವಳಿ ಖಾತೆ ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್ ಅವರು ಮಾತನಾಡಿ ಶ್ಯಾಮ್ ಪ್ರಕಾಶ್ ಮುಖರ್ಜಿ ಅವರು ನಮ್ಮ ಮುಖಂಡರು ಇವರು 1949 ರಲ್ಲಿ ಕೇಂದ್ರ ರೇಷ್ಮೆ ಮಂಡಳಿಯನ್ನು ಪ್ರಾರಂಭಿಸಿದರು. ಮೈಸೂರಿನ ರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರಿಗೆ ರೇಷ್ಮೆಯನ್ನು ಪರಿಚಯಿಸಿದರು. ಮೈಸೂರು ರೇಷ್ಮೆ ಸೀರೆಗಳು ಇಂದು ವಿಶ್ವ ಪ್ರಸಿದ್ಧಿಯನ್ನು ಪಡೆದಿವೆ. ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳು ರೇಷ್ಮೆ ಉದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದರು. ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ರೈತರ ಅದಾಯವನ್ನು ಹೆಚ್ಚಿಸುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕರ್ನಾಟಕದಲ್ಲಿ ತೆಂಗು ಬೆಳೆಯು ತುಮಕೂರು ಹಾಗೂ ರಾಮನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ ಆದರೆ ರೇಷ್ಮೆಯನ್ನು ಕರ್ನಾಟಕದ ಹೆಚ್ಚು ಜಿಲ್ಲೆಗಳಲ್ಲಿ ಬೆಳೆಯುತ್ತಾರೆ. ಚೈನಾದ ರೇಷ್ಮೆಯಿಂದ ಭಾರತದ ರೇಷ್ಮೆಗೆ ಬೆಲೆ ಕಡಿಮೆ ಇದೆ. ಆದರೆ ಮುಂದಿನ ದಿನಗಳಲ್ಲಿ ಚೈನಾದ ರೇಷ್ಮೆ ಕಡಿಮೆ ಆಗುತ್ತದೆ ಅಲ್ಲಿ ಕೆಲಸಗಾರರ ಕೊರತೆ ಉಂಟಾಗುತ್ತಿದೆ. ಇದರಿಂದ ಭಾರತದ ರೇಷ್ಮೆಗೆ ಉತ್ತಮ ಬೆಲೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೆಳೆಯಲಾಗುತ್ತದೆ. ರೇಷ್ಮೆ ಬೆಳೆಯನ್ನು ಬೆಳೆಯುವುದರಿಂದ ರೈತರು ಉತ್ತಮ ಆದಾಯ ಗಳಿಸಬಹುದಾಗಿದೆ. ದೇಶದ ರೇಷ್ಮೆ ಬೆಳೆಗಾರರ ಹಿತ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಕೇಂದ್ರ ಜವಳಿ ರಾಜ್ಯ ಸಚಿವರಾದ ಪವಿತ್ರ ಮಾರ್ಗರೇಟ್ ಕನ್ನಡ ಭಾಷೆಯ ಹೆಚ್ಚು ಶ್ರೀಮಂತವಾದ ಬಾಷೆಯಾಗಿದೆ. ರೇಷ್ಮೆ ಬೆಳೆಯು ಅಬಿವೃದ್ದಿ ಹೊಂದಲು 1949 ರಿಂದ ರೇಷ್ಮೆ ಮಂಡಳಿಯ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ರೇಷ್ಮೆ ಯು ಒಂದು ಉತ್ತಮ ಉದ್ದಿಮೆಯಾಗಿದೆ. ದೇಶದ ರಾಷ್ಟ್ರೀಯ ಆದಾಯದಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಇದು ಗ್ರಾಮೀಣ ಜನರ ಹಾಗೂ ಮಹಿಳೆಯರ ನೆಚ್ಚಿನ ಬೆಳೆಯಾಗಿದೆ. ಇದರಿಂದ ಗ್ರಾಮಿಣ ಜನರ ಆದಾಯವನ್ನು ಹೆಚ್ಚಿಸುತ್ತಿದೆ ಎಂದು ತಿಳಿಸಿದರು. ಜವಳಿ ಉದ್ಯಮವು ಅಗಾಧವಾಗಿ ಬೆಳೆದಿದೆ. ಕೋಟ್ಯಾಂತರ ಜನರಿಗೆ ಜವಳಿ ಉದ್ಯಮವು ಉದ್ಯೋಗವನ್ನು ನೀಡಿದೆ. ದೇಶದ ಜಿಡಿಪಿ ಗೆ ಜವಳಿ ಉದ್ಯಮವು ಉತ್ತವಾದ ಕೊಡುಗೆ ನೀಡುತ್ತಿದೆ ಎಂದು ಮಾಹಿತಿ ನೀಡಿದರು. ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಕೆ.ವೆಂಕಟೇಶ್ ಅವರು ಮಾತನಾಡಿ ರೇಷ್ಮೆ ಕರ್ನಾಟಕ ರಾಜ್ಯದಲ್ಲಿ ಪ್ರತಿಷ್ಠಿತ ಬೆಳೆಯಾಗಿದೆ. ಕೇಂದ್ರ ಸರಕಾರದಿಂದ ರೇಷ್ಮೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇಡೀ ವಿಶ್ವದಲ್ಲಿ ಮೈಸೂರು ರೇಷ್ಮೆ ಸೀರೆಗಳು ಹೆಚ್ಚು ಪ್ರಸಿದ್ಧಿ ಆಗಿವೆ. ರೇಷ್ಮೆ ಬೆಳೆಗಾರರಿಗೆ ಅನುಕೂಲಕರವಾದ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ಮನವಿ ಮಾಡಿದರು. ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ ಮೈಸೂರಿಗೂ ರೇಷ್ಮೆಗೂ ಅವಿನಾಭಾವ ಸಂಬoಧ ಇದೆ. ವಿಜಯನಗರ ಅರಸರ ಕಾಲದಿಂದ ರೇಷ್ಮೆ ಇಲ್ಲಿ ಪ್ರಚಲಿತದಲ್ಲಿ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರೇಷ್ಮೆ ಬೆಳೆಯ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ರೇಷ್ಮೆ ಬೆಳೆಗೆ ಪ್ರೋತ್ಸಾಹ ನೀಡಲು ಎಲ್ಲಾ ರೀತಿಯ ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದರು. ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಹಾಗೂ ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯರಾದ ಡಾ.ಕೆ ಸುಧಾಕರ್ ಅವರು ಮಾತನಾಡಿ ದೇಶದ 26 ರಾಜ್ಯಗಳಲ್ಲಿ ರೇಷ್ಮೆಯನ್ನು ಬೆಳೆಯುತ್ತಿದ್ದಾರೆ. ಆಧುನಿಕ ತಂತ್ರಜ್ಞಾನ ಅಭಿವೃದ್ಧಿ ಹೊಂದಿರುವುದರಿoದ ಇಳುವರಿಯೂ ಹೆಚ್ಚಾಗಿದೆ. ಅದೇ ರೀತಿ ಬೆಲೆಯೂ ಹೆಚ್ಚಾಗಿದೆ. ಮೈಸೂರಿಗೆ ಜರ್ಮನಿಯಿಂದ ರೇಷ್ಮೆ ಬೆಳೆಯನ್ನು ತಂದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಶಿಡ್ಲಘಟ್ಟದಲ್ಲಿ ಹೈಟೆಕ್ ಮಾರುಕಟ್ಟೆಯನ್ನು ಸ್ಥಾಪಿಸಲಾಗುತ್ತಿದೆ ಎಂದರು. ಮಧ್ಯವರ್ತಿಗಳ ಹಾವಳಿಯಿಂದ ರೈತರು ಬೆಳೆದ ಬೆಳೆಗೆ ಉತ್ತಮವಾದ ಬೆಲೆ ದೋರುತ್ತಾ ಇಲ್ಲ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಜವಳಿ ಇಲಾಖೆಯ ಕಾರ್ಯದರ್ಶಿಗಳಾದ ರಚನಾ ಷಾ ಅವರು ಮಾತನಾಡಿ, ನಾವು ಇಂದು ಕೇಂದ್ರ ರೇಷ್ಮೆ ಮಂಡಳಿಯ 75 ವರ್ಷ ಆಚರಣೆ ಮಾಡುತ್ತಾ ಇದ್ದೇವೆ. 1949 ರಲ್ಲಿ ಕೇಂದ್ರ ರೇಷ್ಮೆ ಮಂಡಳಿ ಪ್ರಾರಂಭವಾಯಿತು. ಜವಳಿ ವಲಯವು ಪ್ರಮುಖವಾದ ವಾಲಯವಾಗಿದೆ.…
ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ-ಸಿ.ಎಂ.ಸಿದ್ದರಾಮಯ್ಯ
ಮೈಸೂರು: ಕರ್ನಾಟಕದಲ್ಲಿ ವಾಸಿಸುವ ಪ್ರತಿಯೊಬ್ಬರೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುವ ವಾತಾವರಣವನ್ನು ಸೃಷ್ಟಿಸಬೇಕು. ಇದು ಕನ್ನಡಿಗರಾದ ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದರು. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮನ್ವಯ- ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸುವರ್ಣ ಸಂಭ್ರಮ ಕರ್ನಾಟಕ 50 “ಕರ್ನಾಟಕ ಸಾಂಸ್ಕೃತಿಕ ಮುನ್ನೋಟ:ಚಿಂತನಾ ಸಮಾವೇಶ”ವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಪ್ರಸ್ತುತ ಕರ್ನಾಟಕದಲ್ಲಿ ಯಾವ ಭಾಷೆಯನ್ನಾದರೂ ಬಳಸಿ ಬದುಕಬಹುದು ಎಂಬ ವಾತಾವರಣ ನಿರ್ಮಾಣವಾಗಿದೆ. ಆದರೇ ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ಹಾಗೂ ಅಗ್ರಭಾಷೆ ಹಾಗಾಗಿ ಅನ್ಯರಾಜ್ಯ, ವಿದೇಶದಿಂದ ಬಂದoತವರು ಕನ್ನಡವನ್ನು ಕಡ್ಡಾಯವಾಗಿ ಕಲಿತು ಕನ್ನಡದಲ್ಲೇ ವ್ಯವಹರಿಸಬೇಕು. ಕನ್ನಡವು ಕೆಲವೇ ಜನರದ್ದಾಗದೆ ಏಳು ಕೋಟಿ ಕನ್ನಡಿಗರ ಉಸಿರಾಗಬೇಕು. ಕನ್ನಡವನ್ನು ಕಲಿಯಲು ಮರೆಯಬಾರದು ಕನ್ನಡವನ್ನು ಮಾತನಾಡಲು ಬಿಡಬಾರದು ಎಂಬ ಸಾಲಿನ ಸಾರಾಂಶವನ್ನು ಪಾಲಿಸಬೇಕು ಎಂದು ಹೇಳಿದರು. ಕರ್ನಾಟಕದಲ್ಲಿ ಬದುಕನ್ನು ಕಟ್ಟಿಕೊಂಡವರು, ಅನ್ಯ ಭಾಷಿಗರು, ಕನ್ನಡವನ್ನು ಮಾತನಾಡುವವರಾಗಬೇಕು. ನಾವು ಯಾವುದೇ ಭಾಷೆಯನ್ನು ದ್ವೇಷಿಸುವುದಿಲ್ಲ. ಎಲ್ಲಾ ಭಾಷೆಯನ್ನು ಕಲಿಯಬೇಕು ಆದರೇ ಕನ್ನಡವನ್ನು ಹೆಚ್ಚಾಗಿ ಬಳಸಬೇಕು. ಬೇರೆ ರಾಜ್ಯದ ಜನರಂತೆ ನಾವು ನಮ್ಮ ಮಾತೃ ಭಾಷೆಯಾದ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕನ್ನಡ ನಾಡಿನಲ್ಲಿ ಹುಟ್ಟಿದ ನಾವು, ಕನ್ನಡ ನಾಡು ನುಡಿಗೆ ನಮ್ಮದೇ ಅದ ಕೊಡುಗೆಯನ್ನು ನೀಡಿ ಬೆಳಸಬೇಕು ಎಂದು ಹೇಳಿದರು. ಡಿ.ದೇವರಾಜ ಅರಸು ಅವರು 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ನಾಮಕರಣ ಕಳೆದ ವರ್ಷಕ್ಕೆ 50 ವರ್ಷ ಪೂರೈಸಿದ್ದು, ಅಂದಿನ ಸರ್ಕಾರ ಸಂಭ್ರಮಾಚರಣೆಯನ್ನು ಮಾಡಬೇಕಿತ್ತು. ಕಾರಣಾಂತರಗಳಿoದ ನಡೆಯದ ಕಾರಣ ಇಂದು ನಮ್ಮ ಸರ್ಕಾರ ಸಂಭ್ರಮಾಚರಣೆ ಮಾಡಬೇಕೆಂದು 2023-24 ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿ ಇಂದು ಅದನ್ನು ಕನ್ನಡ ಜನೋತ್ಸವವಾಗಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪನವರು ಮಾತನಾಡಿ, ಮೈಸೂರು ರಾಜ್ಯವು ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷಗಳನ್ನು ಪೂರೈಸಿದ್ದು, ಈ ಸಂಭ್ರಮಾಚಾರಣೆಯನ್ನು ಜನರ ಸಾಂಸ್ಕೃತಿಕ ಮುನ್ನೊಟವನ್ನಾಗಿ ಮಾಡಲು ಸರ್ಕಾರವು 4 ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ ಎಂದು ಮಾಹಿತಿ ನೀಡಿದರು. ಕನ್ನಡದ ಸಾಹಿತ್ಯ ಹಾಗೂ ಸಂಸ್ಕೃತಿಯ ಪರಂಪರೆಯು ದೊಡ್ಡದಿದ್ದು, ಸಾಂಸ್ಕೃತಿಕ ನಾಯಕನಾದ ಬಸವಣ್ಣನವರಿಂದ ಕುವೆಂಪು, ಕಾರಂತರoತಹ ಮಹಾನ್ ಸಾಹಿತಿಗಳು ಕೊಡುಗೆ ನೀಡಿದ್ದಾರೆ. ಸಮ ಸಮಾಜದ ನಿರ್ಮಾಣಕ್ಕಾಗಿ ಹೋರಾಡಿ, ಅವೈಜ್ಞಾನಿಕ ಮತ್ತು ಮೂಡನಂಬಿಕೆಗಳನ್ನು ಧಿಕ್ಕರಿಸಿ ಜನರಿಗೆ ನಿಜವಾದ ಸಂಸ್ಕೃತಿಯನ್ನು ತಿಳಿಸಲು ಮುಂದಾಗಿದ್ದರು ಎಂದರು. ಜಾತಿ ವ್ಯವಸ್ಥೆ, ಧರ್ಮಾಧಾರಿತ ಪ್ರಾಬಲ್ಯವನ್ನು ಹೋಗಲಾಡಿಸಲು ನಮ್ಮ ನಾಡಿನ ಹಿರಿಯರು ಕಾಲಕಾಲಕ್ಕೆ ಸಂಸ್ಕೃತಿಯ ಬಗ್ಗೆ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಇಂದಿನ ಕವಿಗಳು ಮತ್ತು ಸಾಹಿತಿಗಳು ತಮ್ಮ ಸಾಹಿತ್ಯದ ಶ್ರೀಮಂತ ಬೇರನ್ನು ಹೆಚ್ಚಿನ ಜನರಿಗೆ ತಲುಪಿಸಿ, ಸಾಹಿತ್ಯ ಹಾಗೂ ಸಂಸ್ಕೃತಿಯಲ್ಲಿ ಅಭಿವೃದ್ಧಿಯ ಬೆಳಕನ್ನು ತರಬೇಕು ಎಂದು ಹೇಳಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ.ಎಸ್.ತಂಗಡಗಿ ಅವರು ಮಾತನಾಡಿ, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ ಇತಿಹಾಸ ಬರೆದಂತಹ ಕ್ಷಣಕ್ಕೆ ಇಂದು 50 ವರ್ಷ ತುಂಬಿದೆ. ಅಂದು ನಾಮಕರಣ ಮಾಡಿದ ಮಾದರಿಯಲ್ಲಿಯೇ ಇಂದು 50 ವರ್ಷದ ಸಂಭ್ರಮಾಚಾರಣೆಯನ್ನು ಮಾಡಲಾಗುತ್ತಿದ್ದು,ಸುವರ್ಣ ಸಂಭ್ರಮ ಕರ್ನಾಟಕದ ರಥವನ್ನು ನಿರ್ಮಿಸಿ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಮೆರವಣಿಗೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಇಂದು ಏರ್ಪಡಿಸಲಾಗಿರುವ ಸಮಾವೇಶಕ್ಕೆ ಬಂದಿರುವoತಹ ಸಾಹಿತಿಗಳು ತಮ್ಮ ಸಲಹೆ ಹಾಗೂ ನಿರ್ಧಾರಗಳನ್ನು ನೀಡುವುದರ ಮೂಲಕ ಸಂಭ್ರಮಾಚರಣೆಯನ್ನು ಇನ್ನಷ್ಟು ಮೆರಗುಗೊಳಿಸಬೇಕು. ಅಲ್ಲದೆ ಚಿಂತನಾ ಸಮಾವೇಶವು ಪ್ರತಿಯೊಬ್ಬರಿಗೂ ಉಪಯುಕ್ತವಾಗುವಂತೆ ಮಾಡಬೇಕು ಎಂದರು. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಅರ್ಥವು ಅನ್ಯ ರೂಪತಾಳಿ ಗಲಭೆಗಳ ಸೃಷ್ಟಿಗೆ ಕಾರಣವಾಗುತ್ತಿದೆ. ಸಾಹಿತಿಗಳು ಕವಿಗಳಾದ ನೀವು ಅವುಗಳನ್ನು ಹೋಗಲಾಡಿಸಲು ಮುಂದಾಗಿ, ಎಲ್ಲಾ ಜನರಲ್ಲೂ ಸಮರಸ್ಯವನ್ನು ಮೂಡಿಸಿ ಅಭಿವೃದ್ಧಿಯ ಲೇಪನವನ್ನು ಹಚ್ಚಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಉಪಾಧ್ಯಕ್ಷರಾದ ಪುಷ್ಪ ಅಮರ್ ನಾಥ್, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಪ್ರೊ. ಶರಣಪ್ಪ ವಿ ಹಲ್ಸೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಧರಣಿ ದೇವಿ ಮಾಲಗತ್ತಿ, ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷರಾದ ಕಾ. ತ.ಚಿಕ್ಕಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ ಎನ್ ಮಲ್ಲಿಕಾರ್ಜುನ್ ಸೇರಿದಂತೆ ಹಿರಿಯ ಸಾಹಿತಿಗಳು ಉಪಸ್ಥಿತರಿದ್ದರು.
ಸಮಾಜ ಸೇವಕರಾದ ಹೆಚ್.ಎನ್.ವಿಜಯ್ ಕುಮಾರ್ ಅವರಿಗೆ ಅಭಿನಂದನೆ
ಸಮಾಜ ಸೇವಕರಾದ ಹೆಚ್.ಎನ್.ವಿಜಯ್ ಕುಮಾರ್ ಅವರಿಗೆ ಅಭಿನಂದನೆ