ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ವಿಶೇಷ ಮಕ್ಕಳಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು…
Category: ಜಿಲ್ಲಾ ಸುದ್ದಿಗಳು
ಮತದಾರರ ಪಟ್ಟಿ ನೋಂದಣಿ ಹಾಗೂ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳ ಸಹಕಾರ ಮುಖ್ಯ : ಸೆಲ್ವಕುಮಾರ್
ಮೈಸೂರು: ಮತದಾರರ ಪಟ್ಟಿ ನೋಂದಣಿ ಹಾಗೂ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳ ಸಹಕಾರವೂ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮತದಾರರ…
ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ, ತಳಮಟ್ಟದಿಂದ ಕೆಲಸ ಮಾಡಬೇಕು:ಸೆಲ್ವಕುಮಾರ್
ಮೈಸೂರು: ಬರಗಾಲದ ಈ ಸಂದರ್ಭದಲ್ಲಿ ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ತಳಮಟ್ಟದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸೆಲ್ವಕುಮಾರ್…
ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಅಡಿ 2 ಲಕ್ಷ ಅಪಘಾತ ಪರಿಹಾರ
ಮೈಸೂರು: ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೂಡೀಕರಿಸುವ ಉದ್ದೇಶದಿಂದ 379 ವರ್ಗಗಳ ಸಂಘಟಿತ ಕಾರ್ಮಿಕರನ್ನು ಇ-ಶ್ರಮ್…
ಜಿಲ್ಲೆಗೊಂದು ಮೆಡಿಕಲ್ ಕಾಲೇಜು – ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
ಮೈಸೂರು: ಪ್ರತಿ ಜಿಲ್ಲೆಗೊಂದರಂತೆ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಲಾಗುವುದೆಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಶುಕ್ರವಾರ ಮೈಸೂರು…
ಓವೆಲ್ ಮೈದಾನದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ
ಮೈಸೂರು: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1 ರಂದು ನಗರದ ಓವೆಲ್ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದ್ದು,ಅಧಿಕಾರಿಗಳು, ಕನ್ನಡ ಚಳುವಳಿಗಾರರು,…
ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರಿಗೌಡ ಅವರ ಪ್ರತಿಮೆ ಅನಾವರಣ
ಮೈಸೂರು:ತೋಟಗಾರಿಕೆ ಪಿತಾಮಹ ಡಾ. ಎಂ.ಹೆಚ್. ಮರಿಗೌಡ ಅವರ ಪ್ರತಿಮೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಇಂದು ನಗರದ ಕರ್ಜನ್ ಪಾರ್ಕ್ ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ತೋಟಗಾರಿಕೆ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ತೋಟಗಾರಿಕಾ ಪಿತಾಮಹ ಡಾ. ಎಂ.ಹೆಚ್. ಮರಿಗೌಡರ ಪ್ರತಿಮೆ ಅನಾವರಣಗೊಳಿಸಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪ್ರತಿಮೆಯು 12 ಅಡಿ ಎತ್ತರವಿದ್ದು, ಒಂದು ಟನ್ ತೂಕದ ಕಂಚಿನ ಪ್ರತಿಮೆಯಾಗಿದೆ. ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ, ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್. ಮೈಸೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಶಿವಕುಮಾರ್, ಶಾಸಕರಾದ, ಕೆ ಹರೀಶ್ ಗೌಡ, ಡಿ ರವಿಶಂಕರ್, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಡಾ. ಕೆ .ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳಿ0ದ ಲಿಂಗಾ0ಬುಧಿ ಸಸ್ಯ ಶಾಸ್ತ್ರೀಯ ತೋಟದ ಉದ್ಘಾಟನೆ
ಮೈಸೂರು:ನಗರದ ರಾಮಕೃಷ್ಣ ನಗರದಲ್ಲಿ ತೋಟಗಾರಿಕೆ ಇಲಾಖೆಯ ಲಿಂಗಾ0ಬುಧಿ ಸಸ್ಯ ಶಾಸ್ತ್ರೀಯ ತೋಟವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಲಿಂಗಾoಬುಧಿ ಸಸ್ಯ ಶಾಸ್ತ್ರೀಯ ತೋಟವು 15 ಎಕರೆ ವಿಸ್ತೀರ್ಣವನ್ನು ಒಳಗೊಂಡಿದ್ದು, ಇದು 2012 ರಲ್ಲಿ ಆರಂಭಗೊ0ಡು 2023ರಲ್ಲಿ ಪೂರ್ಣಗೊಂಡಿತು. ತೋಟದ ಒಟ್ಟಾರೆ ಅಭಿವೃದ್ಧಿ ಮತ್ತು ನಿರ್ವಹಣೆ ವೆಚ್ಚ 5.60 ಕೋಟಿಗಳಾಗಿದ್ದು, ಒಟ್ಟು 290 ಸಸ್ಯ ಪ್ರಭೇದಗಳನ್ನು ಇಲ್ಲಿ ಕಾಣಬಹುದು. ಇಂದು ಲಾಲ್ ಬಾಗ್ ಅನ್ನು ಒಳಗೊಂಡ0ತೆ ತೋಟಗಾರಿಕೆ ಇಲಾಖೆಯು ಅಭಿವೃದ್ಧಿಪಡಿಸಿರುವ ಕರ್ನಾಟಕದ ನಾಲ್ಕನೇ ಸಸ್ಯ ಶಾಸ್ತ್ರೀಯ ತೋಟವಾಗಿದೆ. ಮೈಸೂರು ನಗರ ಮತ್ತು ಜಿಲ್ಲೆಯ ಪ್ರಪ್ರಥಮ ಸಸ್ಯ ಶಾಸ್ತ್ರೀಯ ತೋಟವೆಂಬ ಹೆಗ್ಗಳಿಕೆಯನ್ನು ಲಿಂಗಾoಬುದಿ ಸಸ್ಯ ಶಾಸ್ತ್ರಿಯ ತೋಟ ಪಡೆದುಕೊಂಡಿದೆ. ದೇಶ ವಿದೇಶದ ಸಸ್ಯ ಪ್ರಭೇದಗಳ ಪರಿಚಯ ಸ್ಥಳೀಯ ವಾತಾವರಣಕ್ಕೆ ಒಗ್ಗಿಸುವಿಕೆ, ಸಂರಕ್ಷಣೆ, ಸಸ್ಯಾಭಿವೃದ್ಧಿ ಮತ್ತು ಪ್ರಸರಣ ಕೈಗೊಳ್ಳುವುದು. ಸ್ಥಳೀಯ ಸಸ್ಯ ಪ್ರಭೇದಗಳು, ಅಪರೂಪದ ಅಳಿವಿನಂಚಿನಲ್ಲಿರುವ ಹಾಗೂ ವಿನಾಶದ ಅಂಚಿನಲ್ಲಿರುವ ಸಸ್ಯ ಪ್ರಭೇದಗಳ ಪರಿಚಯ, ಸಂರಕ್ಷಣೆ ಮತ್ತು ಸಸ್ಯಾಭಿವೃದ್ಧಿಗೆ ವಿಶೇಷ ಒತ್ತು ನೀಡುವುದು. ಸಸ್ಯ ಸಂರಕ್ಷಣೆಯ ಜೊತೆ ಜೊತೆಗೆ ಪ್ರಾಣಿ ಮತ್ತು ಪಕ್ಷಿ ಸಂಕುಲಕ್ಕೆ ವಿಶೇಷ ಒತ್ತು ನೀಡುವುದು. ವಿವಿಧ ಸಸ್ಯ ಪ್ರಭೇದಗಳ ನಿಖರ ಗುರುತಿಸುವಿಕೆ ಮತ್ತು ದಾಖಲಾತಿಗಾಗಿ ಹರ್ಬೇರಿಯಂ ಸ್ಥಾಪಿಸುವುದು. ಸಸ್ಯ ಪ್ರಭೇದಗಳ ಸಮಗ್ರ ಮಾಹಿತಿಯನ್ನು ದಾಖಲಿಸುವ ವೈಜ್ಞಾನಿಕ ಸಸ್ಯ ಕೇಂದ್ರವನ್ನಾಗಿಸುವುದು. ಸಸ್ಯ ಪ್ರಭೇದಗಳ ಬಗ್ಗೆ ಅಭ್ಯಸಿಸಲು ವಿದ್ಯಾರ್ಥಿಗಳು, ಪರಿಸರ ಪ್ರಿಯರು, ಸಸ್ಯ ಶಾಸ್ತ್ರೀಯ ಆಸಕ್ತರು, ಸಸ್ಯ ವರ್ಗೀಕರಣ ಆಸಕ್ತರಿಗೆ ವೈಜ್ಞಾನಿಕ ವೇದಿಕೆಯನ್ನು ಕಲ್ಪಿಸುವುದು ಈ ಸಸ್ಯ ಶಾಸ್ತ್ರೀಯ ತೋಟದ ಮೂಲ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್, ವಿಧಾನಸಭಾ ಶಾಸಕರಾದ ಜಿ .ಟಿ ದೇವೇಗೌಡ, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ ಸೇರಿದಂತೆ ಇತರರು ಭಾಗವಹಿಸಿದ್ದರು.
ದೇಶದ ಆಹಾರ ಭದ್ರತೆಯಲ್ಲಿ ಕೃಷಿ ವಿಜ್ಞಾನಿಗಳು ಹಾಗೂ ವಿದ್ಯಾರ್ಥಿಗಳ ಕೊಡುಗೆ ಮಹತ್ವವಾದ್ದು : ಮುನಿಭೈರಪ್ಪ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಗ್ರಾಮ ಸಭೆ ಯಶಸ್ವಿಬೆಂಗಳೂರು: ದೇಶದ ಆಹಾರ ಕೊರತೆ ನೀಗಿಸಲು ಕೃಷಿ ವಿಜ್ಞಾನಿಗಳು…
ಕಣ್ಣು ಪ್ರತಿಯೊಬ್ಬರಿಗೂ ಪ್ರಮುಖ ಅಂಗ : ವೈದ್ಯಾಧಿಕಾರಿ ಡಾ.ಕಲ್ಲೇಶ್
ಮೈಸೂರು: ಕಣ್ಣು ಪ್ರತಿಯೊಬ್ಬರಿಗೂ ಪ್ರಮುಖವಾದ ಅಂಗವಾಗಿದೆ ಎಂದು ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಲ್ಲೇಶ್ ಹೇಳಿದರು. ಅವರು ಕರ್ನಾಟಕ ಪ್ರೆಸ್…