ಓವೆಲ್ ಮೈದಾನದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಮೈಸೂರು: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1 ರಂದು ನಗರದ ಓವೆಲ್ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದ್ದು,ಅಧಿಕಾರಿಗಳು, ಕನ್ನಡ ಚಳುವಳಿಗಾರರು,…

ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರಿಗೌಡ ಅವರ ಪ್ರತಿಮೆ ಅನಾವರಣ

ಮೈಸೂರು:ತೋಟಗಾರಿಕೆ ಪಿತಾಮಹ ಡಾ. ಎಂ.ಹೆಚ್. ಮರಿಗೌಡ ಅವರ ಪ್ರತಿಮೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಇಂದು ನಗರದ ಕರ್ಜನ್ ಪಾರ್ಕ್ ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ತೋಟಗಾರಿಕೆ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ತೋಟಗಾರಿಕಾ ಪಿತಾಮಹ ಡಾ. ಎಂ.ಹೆಚ್. ಮರಿಗೌಡರ ಪ್ರತಿಮೆ ಅನಾವರಣಗೊಳಿಸಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪ್ರತಿಮೆಯು 12 ಅಡಿ ಎತ್ತರವಿದ್ದು, ಒಂದು ಟನ್ ತೂಕದ ಕಂಚಿನ ಪ್ರತಿಮೆಯಾಗಿದೆ. ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ, ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್. ಮೈಸೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಶಿವಕುಮಾರ್, ಶಾಸಕರಾದ, ಕೆ ಹರೀಶ್ ಗೌಡ, ಡಿ ರವಿಶಂಕರ್, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಡಾ. ಕೆ .ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳಿ0ದ ಲಿಂಗಾ0ಬುಧಿ ಸಸ್ಯ ಶಾಸ್ತ್ರೀಯ ತೋಟದ ಉದ್ಘಾಟನೆ

 ಮೈಸೂರು:ನಗರದ ರಾಮಕೃಷ್ಣ ನಗರದಲ್ಲಿ ತೋಟಗಾರಿಕೆ ಇಲಾಖೆಯ ಲಿಂಗಾ0ಬುಧಿ ಸಸ್ಯ ಶಾಸ್ತ್ರೀಯ ತೋಟವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಲಿಂಗಾoಬುಧಿ ಸಸ್ಯ ಶಾಸ್ತ್ರೀಯ ತೋಟವು 15 ಎಕರೆ ವಿಸ್ತೀರ್ಣವನ್ನು ಒಳಗೊಂಡಿದ್ದು, ಇದು 2012 ರಲ್ಲಿ ಆರಂಭಗೊ0ಡು 2023ರಲ್ಲಿ ಪೂರ್ಣಗೊಂಡಿತು. ತೋಟದ ಒಟ್ಟಾರೆ ಅಭಿವೃದ್ಧಿ ಮತ್ತು ನಿರ್ವಹಣೆ ವೆಚ್ಚ 5.60 ಕೋಟಿಗಳಾಗಿದ್ದು, ಒಟ್ಟು 290 ಸಸ್ಯ ಪ್ರಭೇದಗಳನ್ನು ಇಲ್ಲಿ ಕಾಣಬಹುದು. ಇಂದು ಲಾಲ್ ಬಾಗ್ ಅನ್ನು ಒಳಗೊಂಡ0ತೆ ತೋಟಗಾರಿಕೆ ಇಲಾಖೆಯು ಅಭಿವೃದ್ಧಿಪಡಿಸಿರುವ ಕರ್ನಾಟಕದ ನಾಲ್ಕನೇ ಸಸ್ಯ ಶಾಸ್ತ್ರೀಯ ತೋಟವಾಗಿದೆ. ಮೈಸೂರು ನಗರ ಮತ್ತು ಜಿಲ್ಲೆಯ ಪ್ರಪ್ರಥಮ ಸಸ್ಯ ಶಾಸ್ತ್ರೀಯ ತೋಟವೆಂಬ ಹೆಗ್ಗಳಿಕೆಯನ್ನು ಲಿಂಗಾoಬುದಿ ಸಸ್ಯ ಶಾಸ್ತ್ರಿಯ ತೋಟ ಪಡೆದುಕೊಂಡಿದೆ. ದೇಶ ವಿದೇಶದ ಸಸ್ಯ ಪ್ರಭೇದಗಳ ಪರಿಚಯ ಸ್ಥಳೀಯ ವಾತಾವರಣಕ್ಕೆ ಒಗ್ಗಿಸುವಿಕೆ, ಸಂರಕ್ಷಣೆ, ಸಸ್ಯಾಭಿವೃದ್ಧಿ ಮತ್ತು ಪ್ರಸರಣ ಕೈಗೊಳ್ಳುವುದು. ಸ್ಥಳೀಯ ಸಸ್ಯ ಪ್ರಭೇದಗಳು, ಅಪರೂಪದ ಅಳಿವಿನಂಚಿನಲ್ಲಿರುವ ಹಾಗೂ ವಿನಾಶದ ಅಂಚಿನಲ್ಲಿರುವ ಸಸ್ಯ ಪ್ರಭೇದಗಳ ಪರಿಚಯ, ಸಂರಕ್ಷಣೆ ಮತ್ತು ಸಸ್ಯಾಭಿವೃದ್ಧಿಗೆ ವಿಶೇಷ ಒತ್ತು ನೀಡುವುದು. ಸಸ್ಯ ಸಂರಕ್ಷಣೆಯ ಜೊತೆ ಜೊತೆಗೆ ಪ್ರಾಣಿ ಮತ್ತು ಪಕ್ಷಿ ಸಂಕುಲಕ್ಕೆ ವಿಶೇಷ ಒತ್ತು ನೀಡುವುದು. ವಿವಿಧ ಸಸ್ಯ ಪ್ರಭೇದಗಳ ನಿಖರ ಗುರುತಿಸುವಿಕೆ ಮತ್ತು ದಾಖಲಾತಿಗಾಗಿ ಹರ್ಬೇರಿಯಂ ಸ್ಥಾಪಿಸುವುದು. ಸಸ್ಯ ಪ್ರಭೇದಗಳ ಸಮಗ್ರ ಮಾಹಿತಿಯನ್ನು ದಾಖಲಿಸುವ ವೈಜ್ಞಾನಿಕ ಸಸ್ಯ ಕೇಂದ್ರವನ್ನಾಗಿಸುವುದು. ಸಸ್ಯ ಪ್ರಭೇದಗಳ ಬಗ್ಗೆ ಅಭ್ಯಸಿಸಲು ವಿದ್ಯಾರ್ಥಿಗಳು, ಪರಿಸರ ಪ್ರಿಯರು, ಸಸ್ಯ ಶಾಸ್ತ್ರೀಯ ಆಸಕ್ತರು, ಸಸ್ಯ ವರ್ಗೀಕರಣ ಆಸಕ್ತರಿಗೆ ವೈಜ್ಞಾನಿಕ ವೇದಿಕೆಯನ್ನು ಕಲ್ಪಿಸುವುದು ಈ ಸಸ್ಯ ಶಾಸ್ತ್ರೀಯ ತೋಟದ ಮೂಲ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್, ವಿಧಾನಸಭಾ ಶಾಸಕರಾದ ಜಿ .ಟಿ ದೇವೇಗೌಡ, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಕಣ್ಣು ಪ್ರತಿಯೊಬ್ಬರಿಗೂ ಪ್ರಮುಖ ಅಂಗ : ವೈದ್ಯಾಧಿಕಾರಿ ಡಾ.ಕಲ್ಲೇಶ್

ಮೈಸೂರು: ಕಣ್ಣು ಪ್ರತಿಯೊಬ್ಬರಿಗೂ ಪ್ರಮುಖವಾದ ಅಂಗವಾಗಿದೆ ಎಂದು ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಲ್ಲೇಶ್ ಹೇಳಿದರು. ಅವರು ಕರ್ನಾಟಕ ಪ್ರೆಸ್…

ಅನ್ವೇಷಣಾ ಸಂಸ್ಥೆಯಲ್ಲ್ಲಿ ವಿವಿಧ ಸ್ಫರ್ಧೆಗಳು

ಬಿಳಿಗೆರೆ : ಅನ್ವೇಷಣಾ ಶಿಕ್ಷಣ ಸಂಸ್ಥೆಯು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಸದುದ್ದೇಶದಿಂದ ಎಂಟು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ಯಾಟ್…

ಕೆ.ಟಿ.ಮೋಹನ್ ಕುಮಾರ್ ಗೆ ಶಾಸಕ ರವಿಶಂಕರ್ ಅವರಿಂದ ಸನ್ಮಾನ

ಕೃಷ್ಣರಾಜನಗರ : ಮೈಸೂರು ಜಿಲ್ಲೆಯ ಸಾಲಿಗ್ರಾಮದ ಆಂದೋಲನ ದಿನಪತ್ರಿಕೆಯ ಪ್ರತಿನಿಧಿ ಹಾಗೂ ಕರ್ನಾಟಕ ಪ್ರೆಸ್ ಕ್ಲಬ್ ನ ಕೃಷ್ಣರಾಜನಗರ ತಾಲೂಕು ಘಟಕದ…

ದಸರಾ ಕಾರ್ಯಕ್ರಮಗಳನ್ನು ವರ್ಚುವಲ್ ಆಗಿ ವೀಕ್ಷಿಸಲು ಲಿಂಕ್‌ಗಳು

ಮೈಸೂರು,ಅ.14.(ಕರ್ನಾಟಕ ವಾರ್ತೆ):- ದಸರಾ ಮಹೋತ್ಸವ 2023 ರ ಉದ್ಘಾಟನೆಯನ್ನು ನಾದಬ್ರಹ್ಮ ಡಾ.ಹಂಸಲೇಖ ಅವರು ಚಾಮುಂಡಿ ದೇವಿಯ ಅಗ್ರ ಪೂಜೆಯೊಂದಿಗೆ ದಿನಾಂಕ 15-10-2023…

ಎಚ್.ಎನ್.ರಮೇಶ್ ಗೆ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರಧಾನ

ಮೈಸೂರು: ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದ ಸಿವಿಲ್ ಇಂಜಿನಿಯರ್ ಹೆಚ್.ಎನ್.ರಮೇಶ್ ಅವರಿಗೆ ಕನ್ನಡ ಪ್ರಭ ದಿನಪತ್ರಿಕೆ ಹಾಗೂ ಏಷ್ಯಾ…

ಸುರಕ್ಷತೆಯ ಕಡೆಗೂ ಗಮನವಿರಲಿ – ಜಿಲ್ಲಾಧಿಕಾರಿ

ಮೈಸೂರು: ದಸರಾ ಮಹೋತ್ಸವದ ಆಚರಣೆಯಲ್ಲಿ ಸುರಕ್ಷತೆಯ ಕಡೆಗೂ ಗಮನವಿರಲಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ಅರಮನೆ ಮಂಡಳಿ ಕಚೇರಿಯಲ್ಲಿ ಇಂದು ನಡೆದ…

ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಯಲ್ಲಿ ವಿಶ್ವ ಸಂಧಿವಾತ ದಿನಾಚರಣೆ ಮತ್ತು “ವಿಶೇಷ ಪ್ಯಾಕೇಜ್” ಬಿಡುಗಡೆ

ಮೈಸೂರು: ಜೆಎಸ್‍ಎಸ್ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಸಂಧಿವಾತ ದಿನಾಚರಣೆಯನ್ನು ಆಚರಿಸುವ ಮೂಲಕ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲಾಯಿತು. ವೈದ್ಯಕೀಯ ಅಧೀಕ್ಷಕರಾದ ಡಾ.…