ಚಾಮರಾಜನಗರದಲ್ಲಿ ಭಗವಾನ್ ಶ್ರೀ ಬಿರ್ಸಾ ಮುಂಡಾ ಜಯಂತಿ ಆಚರಣೆ

ಕೇಂದ್ರ ಸಂವಹನ ಇಲಾಖೆ ವತಿಯಿಂದ ಛಾಯಾಚಿತ್ರ ಪ್ರದರ್ಶನ, ಬುಡಕಟ್ಟು ಸಮುದಾಯದವರಿಗೆ ಉಚಿತ ವೈದ್ಯಕೀಯ ತಪಾಸಣೆ

ಚಾಮರಾಜನಗರ: ಸಂವಹನ ಇಲಾಖೆ, ಮೈಸೂರು, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಾಮರಾಜನಗರ ಇವರ ಸಂಯುಕ್ತಾಶ್ರಯದಲ್ಲಿ ಭಗವಾನ್ ಶ್ರೀ ಬಿರ್ಸಾ ಮುಂಡಾ ಜಯಂತಿ, ಜನಜಾತೀಯ ಗೌರವ ದಿವಸ 2025ರ ಅಂಗವಾಗಿ ಎರಡು ದಿನಗಳ ಕಾಲ ಛಾಯಾಚಿತ್ರ ಪ್ರದರ್ಶನವನ್ನು ಚಾಮರಾಜನಗರದ ಜೆ.ಹೆಚ್, ಪಟೇಲ್ ಸಭಾಂಗಣದ ಬಳಿ ಹಮ್ಮಿಕೊಳ್ಳಲಾಯಿತು.

  ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಚಾಮರಾಜನಗರ ವಿಶ್ವವಿದ್ಯಾನಿಲಯ ಕುಲಪತಿಗಳಾದ ಪೆÇ್ರ. ಎಂ.ಆರ್. ಗಂಗಾಧರ್ ಅವರು ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದರು.

   ಈ ಛಾಯಾಚಿತ್ರ ಪ್ರದರ್ಶನದಲ್ಲಿ ಬುಡಕಟ್ಟು ಸಮುದಾಯದ ಸಬಲೀಕರಣಕ್ಕೆ ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪ್ರದರ್ಶಿಸಲಾಯಿತು. ಬುಡಕಟ್ಟು ಗೌರವ ದಿನ ಅಂಗವಾಗಿ ಸುಧಾರಿತ ಮೂಲಸೌಕರ್ಯ ಮತ್ತು ಜೀವನೋಪಾಯಗಳ ಅವಕಾಶಗಳು, ಸಬಲೀಕರಣಕ್ಕಾಗಿ ಪ್ರಮುಖ ಕೇಂದ್ರ ಸರ್ಕಾರಿ ಯೋಜನೆಗಳು, ಪಿ.ಎಂ ಜನಮನ, ಏಕಲವ್ಯ ಮಾದರಿ ವಸತಿ ಶಾಲೆಗಳು, ಇತ್ಯಾದಿ ವಿಷಯಗಳ ಕುರಿತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.

   ಛಾಯಾಚಿತ್ರ ಪ್ರದರ್ಶನದ ಭಾಗವಾಗಿ ಸ್ವಸಹಾಯ ಗುಂಪು ಮತ್ತು ಬುಡಕಟ್ಟು ಜನಾಂಗದವರು ತಮ್ಮ ಉತ್ಪನ್ನ ಪ್ರದರ್ಶಿಸಲು ಮಳಿಗೆ ತೆರೆಯಲಾಗಿತ್ತು.

  ಇದೇ ಸಂದರ್ಭದಲ್ಲಿ ಬುಡಕಟ್ಟು ಜನಾಂಗದವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಸಿಕಲ್ ಸೆಲ್ ಅನೀಮಿಯಾಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವ್ಯವಸ್ಥೆ ಕಲ್ಪಿಸಲಾಗಿತ್ತು. ಛಾಯಾಚಿತ್ರ ಪ್ರದರ್ಶನಕ್ಕೆ ಆಗಮಿಸಿದ ಜನರಿಗೆ ನ್ಯೂ ಇಂಡಿಯಾ ಸಮಾಚಾರ, ಪುಸ್ತಕವನ್ನೂ ವಿತರಿಸಲಾಯಿತು.

  ಚಾಮರಾಜನಗರ ಬುಡಕಟ್ಟು ಜನಾಂಗದ ಸಂಘದ ಅಧ್ಯಕ್ಷರಾದ ರಂಗಪ್ಪ ನೇತೃತ್ವದಲ್ಲಿ ಬುಡಕಟ್ಟು ಸಮುದಾಯದವರು ಮತ್ತು ಮಕ್ಕಳು "ಏಕ್ ಪೇಡ್ ಮಾ ಕೇ ನಾಮ್" ಹೆಸರಿನಲ್ಲಿ ಹಲಸಿನ ಸಸಿ ನೆಟ್ಟರು.

   ಚಾಮರಾಜನಗರದ ರಂಗಸಂದ್ರ ಆಶ್ರಮ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಮತ್ತು ಬುಡಕಟ್ಟು ಕಲ್ಯಾಣ ವರ್ಗಗಳ ಇಲಾಖೆ ವತಿಯಿಂದ ಖೇಲೋ ಇಂಡಿಯಾ, ಫಿಟ್ ಇಂಡಿಯಾ ಪೆÇ್ರೀತ್ಸಾಹಿಸಲು ಆಯೋಜಿಸಿದ್ದ ವಾಲಿಬಾಲ್, ಖೋ-ಖೋ ಹಾಗೂ ಇತರೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

  ಜಯಂತಿ ಆಚರಣೆ ಅಂಗವಾಗಿ ಚಾಮರಾಜೇಶ್ವರ ದೇವಸ್ಥಾನದಿಂದ ಜಾಥಾ ನಡೆಯಿತು. ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ  ಸಿ. ಪುಟ್ಟರಂಗಶೆಟ್ಟಿ ಅವರು ಜಾಥಾಗೆ ಚಾಲನೆ ನೀಡಿದರು. ಪ್ರಧಾನ ಮಂತ್ರಿಯವರ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆ ಆಯೋಜಿಸಲಾಗಿತ್ತು.

  ಕೊಳ್ಳೇಗಾಲ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿ, ಪ್ರಶಂಸೆ ವ್ಯಕ್ತಪಡಿಸಿದರು. 

  ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಕ್ಷೇತ್ರ ಪ್ರಚಾರಾಧಿಕಾರಿ ಶೃತಿ ಎಸ್.ಟಿ, ಕ್ಷೇತ್ರ ಪ್ರಚಾರ ಸಹಾಯಕರಾದ ಪಿ. ದರ್ಶನ್, ಸಿ.ಕೆ ಸುರೇಶ್ ಹಾಜರಿದ್ದರು.

  ಕಾರ್ಯಕ್ರಮದ ಅಂಗವಾಗಿ ನಿನ್ನೆ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮೋನಾ ರೋತ್, ಪರಿಶಿಷ್ಟ ಜಾತಿ ಹಾಗೂ ಸೋಲಿಗ ಸಮುದಾಯದ ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *