ಡಿ.ಕೆ.ಶಿವಕುಮಾ‌ರ್ ಸರ್ಕಾರಕ್ಕೆ ಶತದಿನದ ಸಂಭ್ರಮ : ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ

ಚಾಮರಾಜನಗರ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ
ಶತದಿನ ಪೂರೈಸಿದ ಹಿನ್ನಲೆಯಲ್ಲಿ ಅವರ ಅಭಿಮಾನಿ ಬಳಗದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಜೇಷಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.
ಡಿ.ಕೆ.ಶಿವಕುಮಾರ್ ಅಭಿಮಾನಿ
ಬಳಗದ ಅಧ್ಯಕ್ಷ ಪುಟ್ಟಸ್ವಾಮಿಗೌಡ ಅವರ ‌ ‌ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‌ ‌ ಹೆಸರಿನಲ್ಲಿ ಆರ್ಚನೆ ಮಾಡಿಸಿ, ವಿಶೇಷಪೂಜೆ ಸಲ್ಲಿ ಸಲಾಯಿತು. ದೇವಸ್ಥಾನದ ಮುಂಭಾಗದಲ್ಲಿ ಡಿ.ಕೆ.ಶಿವಕುಮಾ‌ರ್ ಭಾವಚಿತ್ರ ಹಿಡಿದು ಜೈಕಾರದ ಘೋಷಣೆ ಕೂಗಿ ಸಂಭ್ರಮಿಸಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಬಳಗದ ಅಧ್ಯಕ್ಷ ಪುಟ್ಟಸ್ವಾಮಿಗೌಡ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯಸರ್ಕಾರ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ. ಉಳಿದ ಅವಧಿಯನ್ನು ಸಂಪೂರ್ಣವಾಗಿ ಪೂರೈಸಿ ಮುಂದಿನ ಚುನಾವಣೆಯಲ್ಲಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್
ಅಧಿಕಾರಕ್ಕೆ ಬಂದು ಮತ್ತೆ 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದರು.
   ಸಿಎಂ ಡಿ.ಕೆ.ಶಿವಕುಮಾರ್ ಅವರ ಸರ್ಕಾರಕ್ಕೆ ನೂರು ದಿನಗಳ ಪೂರೈಸಿದ ಹಿನ್ನೆಲೆಯಲ್ಲಿ ಅವರು
ರಾಜ್ಯಾದ್ಯಂತ 15 ಲಕ್ಷ ನಿವೇಶನ ನೀಡುವ ಯೋಜನೆ ಘೋಷಣೆ‌ ಮಾಡಿದ್ದು, 100 ದಿನಗಳಲ್ಲಿ ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನಾಂಗದ ಪರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಪಣ್ಯದಹುಂಡಿ ರಾಜು, ಅರುಣ್ ಕುಮಾರ್ ಗೌಡ,  ಟೌನ್ ಒಕ್ಕಲಿಗರ ಸಂಘದ ಅಧ್ಯಕ್ಷ ಮಹೇಶ್, ಲೋಕೇಶ್, ನಾಗರಾಜು, ರಾಜು, ರಘು, ಗುಂಬಳ್ಳಿ ನಾಗರಾಜು ಇತರರು ಹಾಜರಿದ್ದರು.

Leave a Reply

Your email address will not be published. Required fields are marked *