ರಾಜ್ಯದ 28 ಕ್ಷೇತ್ರಗಳಲ್ಲಿಯೂ ಪಕ್ಷದ ಗೆಲುವಿಗೆ ಛಲವಾದಿ ಮಹಾಸಭಾದ ಪಣ : ಅಣಗಳ್ಳಿ ಬಸವರಾಜು
ಚಾಮರಾಜನಗರ: ನಿವೃತ್ತ ಐಎಎಸ್ ಅಧಿಕಾರಿ ದಿವಂಗತ ಕೆ. ಶಿವರಾಂ ಅವರ ಪತ್ನಿ ವಾಣಿ ಕೆ. ಶಿವರಾಂ ಅವರಿಗೆ ಚಾ.ನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಬೇಕೆಂದು ಪಕ್ಷದ ವರಿಷ್ಟರನ್ನು ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಅಣಗಳ್ಳಿ ಬಸವರಾಜು ಒತ್ತಾಯಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ. ಶಿವರಾಂ ಅವರು ನಿವೃತ್ತಿ ನಂತರ ಕಳೆದ 10 ವರ್ಷಗಳಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿ ಪಕ್ಷದ ಎಲ್ಲಾ ಚುನಾವಣೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರಿಗೆ ಕೊನೆಯ ಹಂತದವರಿಗೆ ಅವರು ಚಾಲ್ತಿಯಲ್ಲಿದ್ದು, ನಾನಾ ಕಾರಣಗಳಿಂದ ಟಿಕೆಟ್ ವಂಚಿತರಾಗಿದ್ದು, ಈ ಭಾರಿ ಸತಾಗತಾಯ ಚಾ.ನಗರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಪಡೆಯುವ ಉತ್ಸಾಹದಲ್ಲಿದ್ದರು. ಬಿಜೆಪಿ ವರಿಷ್ಠರಾದ ಯಡಿಯೂರಪ್ಪ ಹಾಗೂ ಅನೇಕ ಮುಖಂಡರು ಸಹ ಕೆ. ಶಿವರಾಂ ಅವರಿಗೆ ಅವಕಾಶ ಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಶಿವರಾಂ ಅವರು ಸಹ ಕ್ಷೇತ್ರದ ವ್ಯಾಪ್ತಿಯ 500 ಕ್ಕು ಹೆಚ್ಚು ಹಳ್ಳಿಗಳಲ್ಲಿ ಪ್ರವಾಸ ಕೈಗೊಂಡು ಸಂಘಟನೆ ಮಾಡಿದ್ದರು ಎಂದರು.
ಆದರೆ, ವಿಧಿಯಾಟ ನಮ್ಮ ನಾಯಕರಾದ ಕೆ. ಶಿವರಾಂ ಅವರು ಫೆ. 29 ರಂದು ಹೃದಯಘಾತದಿಂದ ಅಕಾಲಿಕ ಮರಣ ಹೊಂದಿದರು. ಇದರಿಂದ ರಾಜ್ಯ ಹಾಗು ಛಲವಾದಿ ಮಹಾಸಭಾಗೆ ತುಂಬಲಾದ ನಷ್ಟ ಉಂಟಾಗಿದೆ ಎಂದು ಭಾವುಕರಾದರು. ಈಗ ಅವರ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ಛಲವಾದಿ ಮಹಾಸಭಾದಿಂದ ಅವರ ಕುಟುಂಬದ ನೋವಿನ ಮಧ್ಯೆಯು ಅವರ ಪತ್ನಿ ವಾಣಿ ಶಿವರಾಂ ಅವರನ್ನು ಭೇಟಿಯಾಗಿ, ಕೆ. ಶಿವರಾಂ ಅಣ್ಣ ಅವರ ಸ್ಥಾನವನ್ನು ನೀವು ತುಂಬಬೇಕು. ಈ ನಿಟ್ಟಿನಲ್ಲಿ ಸಕ್ರಿಯ ರಾಜಕಾರಣ ಹಾಗೂ ಸಮಾಜಸೇವೆಗೆ ಬರುವಂತೆ ಅವರನ್ನು ಒಪ್ಪಿಸಿದ್ದೇವೆ ಎಂದರು.
ಹೀಗಾಗಿ, ಕೆ. ಶಿವರಾಂ ಅವರ ಬದಲಾಗಿ ಅವರ ಪತ್ನಿ ವಾಣಿಶಿವರಾಂ ಅವರಿಗೆ ಚಾ.ನಗರ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಗೆಲುವು ಖಚಿತ. ಶಿವರಾಂ ಅವರು ಮಾಡಿರುವ ಜನಪರ ಕೆಲಸಗಳು ಹಾಗೂ ಅವರ ವರ್ಚಸ್ಸು ಕ್ಷೇತ್ರದಲ್ಲಿ ಅನುಕಂಪದ ಆಲೆಯಲ್ಲಿ ವಾಣಿ ಶಿವರಾಂ ಗೆಲುವು ಸಾಧಿಸಲಿದ್ದಾರೆ. ಶಿವರಾಂ ಅವರು ಕಳೆದ 10 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿದ್ದರು. ಹೀಗಾಗಿ ಬಿಜೆಪಿಯಿಂದ ಟಿಕೆಟ್‍ಗ ಪ್ರಥಮ ಅದ್ಯತೆ ನೀಡಿದ್ದೇವೆ. ಇಲ್ಲವೇ ಇತರೇ ಪಕ್ಷಗಳು ಟಿಕೆಟ್ ನೀಡಿದರೆ, ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದಾಗಿರುತ್ತದೆ. ಕ್ಷೇತ್ರದಲ್ಲಿ ಈ ಹಿಂದೆ ಮಾಜಿ ಸಚಿವ ದಿ. ಎಚ್.ಎಸ್. ಮಹದೇವಪ್ರಸಾದ್ ಅವರ ನಿಧನದ ಬಳಿಕ ಗೀತಾ ಮಹದೇವಪ್ರಸಾದ್, ಹಾಗೂ ದಿ. ಆರ್. ಧ್ರುವನಾರಾಯಣ್ ನಂತರ ಅವರ ಪುತ್ರ ದರ್ಶನ್ ಧ್ರುವನಾರಾಯನ್ ಅವರು ಗೆಲುವು ಸಾಧಿಸಿದ್ದಾರೆ. ಆದೇ, ಮಾದರಿಯಲ್ಲಿ ಕೆ. ಶಿವರಾಂ ಅವರ ಜನಪ್ರಿಯತೆಯಲ್ಲಿ ಅವರ ಪತ್ನಿ ವಾಣಿ ಶಿವರಾಂ ಅವರು ಅನುಕಂಪದ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅಣಗಳ್ಳಿ ಬಸವರಾಜು ತಿಳಿಸಿದರು.
13 ರಂದು ಚಾ.ನಗರದಲ್ಲಿ ನುಡಿನಮನ : ಚಾ.ನಗರದಲ್ಲಿ ಜಿಲ್ಲಾ ಛಲವಾದಿ ಮಹಾಸಭಾದಿಂದ ಕೆ. ಶಿವರಾಂ ನಿಧನದ ಗೌರವಾರ್ಥ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಡಾ.ರಾಜ್‍ಕುಮಾರ್ ಕಲಾ ಮಂದಿರದಲ್ಲಿ ನಡೆಯವ ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು, ಶಿವರಾಂ ಅವರ ಅಭಿಮಾನಿಗಳು ಸೇರಿದಂತೆ ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕೆ. ಶಿವರಾಂ ಅಭಿಮಾನಿಗಳು ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹಂಸರಾಜ್, ಜಿಲ್ಲಾ ಅಧ್ಯಕ್ಷ ರಮೇಶ್, ಮಾಜಿ ಅಧ್ಯಕ್ಷರಾದ ನಾರಾಯಣ್, ಉತ್ತುವಳ್ಳಿ ಬಸವಣ್ಣ, ಮಂಟೇಸ್ವಾಮಿ, ಮುಖಂಡರಾದ ಚಾಮರಾಜು, ಶುಭೋದಯ ಸಿದ್ದರಾಜು ಇತರರು ಇದ್ದರು.