
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 16 ರಂದು ಚಾಮರಾಜನಗರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಜಿಲ್ಲೆಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಹಾಗೂ ಫೆಬ್ರವರಿ 17ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.