ಚಾಮರಾಜನಗರ ದಸರಾ ಮಹೋತ್ಸವ : ವೇದಿಕೆ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಚಾಮರಾಜನಗರ: ನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ನಡೆಯಲಿರುವ ದಸರಾ ಮಹೋತ್ಸವದ ಅಂಗವಾಗಿ ವೇದಿಕೆ ನಿರ್ಮಾಣ ಕಾರ್ಯಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.

ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ದಸರಾ ಕಾರ್ಯಕ್ರಮಗಳು ನಡೆಯಲಿರುವ ಬೃಹತ್ ವೇದಿಕೆ ಹಾಗೂ ವಿಶಾಲವಾದ ಶಾಮಿಯಾನ, ಇನ್ನಿತರ ಕಾರ್ಯಗಳ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಚಾಮರಾಜನಗರ ದಸರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಮೂರು ದಿನಗಳ ಕಾಲ ನಡೆಯಲಿರುವ ಉತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ನಗರಸಭೆ ಮಾಜಿ ಅಧ್ಯಕ್ಷರಾದ ಸುರೇಶ್ ನಾಯಕ, ಮಾಜಿ ಉಪಾಧ್ಯಕ್ಷರಾದ ರಾಜಪ್ಪ, ಮಾಜಿ ಸದಸ್ಯರಾದ ಶಿವಣ್ಣ, ಬಂಗಾರ ನಾಯಕ, ಚಾಮುಲ್ ಸದಸ್ಯರಾದ ನಾಗಯ್ಯ, ಅರ್ಚಕರಾದ ರಾಮಕೃಷ್ಣ ಭಾರದ್ವಾಜ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ್ ಸೇರಿದಂತೆ ಇತರರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *