ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2026-27ನೇ ಸಾಲಿನ ಚಾಮರಾಜನಗರ ಜಿಲ್ಲೆಯ ದಸರಾ ಗ್ರಾಮೀಣ ಕ್ರೀಡಾಕೂಟವನ್ನು ಅಕ್ಟೋಬರ್ 17 ಮತ್ತು 18ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಕ್ರೀಡಾಕೂಟದಲ್ಲಿ ಪುರುಷರಿಗೆ ಕಬ್ಬಡಿ, ಖೋ-ಖೋ, ಕ್ರಿಕೆಟ್, ಹಗ್ಗ-ಜಗ್ಗಾಟ, ಮ್ಯೂಸಿಕಲ್ ಚೇರ್, ಸೈಕಲ್ ಪೋಲೋ ಹಾಗೂ ಮಹಿಳೆಯರಿಗೆ ಕಬ್ಬಡಿ, ಖೋ-ಖೋ, ಲೆಮನ್ ಅಂಡ್ ಸ್ಪೂನ್, ಹಗ್ಗ-ಜಗ್ಗಾಟ, ಮ್ಯೂಸಿಕಲ್ ಚೇರ್ ಸ್ಪರ್ಧೆಗಳು ನಡೆಯಲಿವೆ.
ಅಕ್ಟೋಬರ್ 17ರಂದು ಕಬ್ಬಡಿ, ಖೋ-ಖೋ, ಕ್ರಿಕೆಟ್, ಹಗ್ಗ-ಜಗ್ಗಾಟ, ಸೈಕಲ್ ಪೋಲೋ ಹಾಗೂ 18ರಂದು ಲೆಮನ್ ಅಂಡ್ ಸ್ಪೂನ್ ಮತ್ತು ಮ್ಯೂಸಿಕಲ್ ಚೇರ್ ಸ್ಪರ್ಧೆಗಳು ಇರಲಿವೆ.
ಕ್ರೀಡಾಕೂಟದಲ್ಲಿ ನೋಂದಣಿಯಾಗಿ ಭಾಗವಹಿಸುವ ಸ್ಪರ್ಧಿಗಳು ತಮ್ಮ ವಿಳಾಸಕ್ಕೆ ಸಂಬಂಧಿಸಿದ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ತರಬೇಕು. ಸ್ಪರ್ಧೆ ನಡೆಯುವ ದಿನಾಂಕದಂದು ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳ್ಳಿಗೆ 9 ಗಂಟೆಗೆ ಸಂಘಟಕರಲ್ಲಿ ವರದಿಕೊಳ್ಳಬೇಕು. ಕ್ರೀಡೆಗಳಿಗೆ ಸಂಬಂಧಿಸಿದಂತೆ ನಿಬಂಧನೆಗಳ ಹಾಗೂ ಷರತ್ತುಗಳಿಗೆ ಒಳಪಟ್ಟು ಭಾಗವಹಿಸಬೇಕು. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮಧ್ಯಾಹ್ನದ ಉಪಹಾರ ಹಾಗೂ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಟ್ರೋಫಿಗಳನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಇಲಾಖೆ ವತಿಯಿಂದ ಯಾವುದೇ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂ.ಸಂ 9916466659, 9945615695, 9880211027, 9844242672 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.