ಚಾಮರಾಜನಗರ: ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 17 ರಿಂದ 19ರವರೆಗೆ ನಗರದಲ್ಲಿ ಆಯೋಜಿಸಲಾಗಿದೆ.
ಅಕ್ಟೋಬರ್ 17Àರಂದು ಬೆಳಿಗ್ಗೆ 10.40 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯದ ಮೂಲಕ ದಸರಾ ಮಹೋತ್ಸವಕ್ಕೆ ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡುವರು. ಸಂಜೆ 5.30 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಖ್ಯ ವೇದಿಕೆಯಲ್ಲಿ ಖ್ಯಾತ ಚಲನಚಿತ್ರ ನಟರಾದ ವಿ. ರವಿಚಂದ್ರನ್ ಅವರು ದಸರಾಗೆ ಚಾಲನೆ ನೀಡುವರು. ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ಸುನೀಲ್ ಬೋಸ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 17Àರಂದು ಬೆಳಿಗ್ಗೆ 11 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. 11.30 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ ನೆರವೇರಲಿದೆ. ಬೆಳಿಗ್ಗೆ 11.45 ಗಂಟೆಗೆ ವರನಟ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮಹಿಳಾ ದಸರಾ ಕಾರ್ಯಕ್ರಮ, 12.30 ಗಂಟೆಗೆ ರಂಗೋಲಿ ಸ್ಪರ್ಧೆ, ಮಧ್ಯಾಹ್ನ 1 ಗಂಟೆಗೆ ಚಿತ್ರಕಲಾ ಪ್ರದರ್ಶನ ಉದ್ಘಾಟನೆಗೊಳ್ಳಲಿದೆ.
ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಡಳಿತ ಭವನದಿಂದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದವರೆಗೆ ವಿವಿಧ ಕಲಾ ತಂಡಗಳಿಂದ ಮತ್ತು ವಿವಿಧ ಇಲಾಖೆಗಳಿಂದ ಸ್ತಬ್ದ ಚಿತ್ರಗಳ ಮೆರವಣಿಗೆ ನಡೆಯಲಿದೆ. ಸಂಜೆ 5.30 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದ ಮುಖ್ಯ ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಂಜೆ 6 ಗಂಟೆಗೆ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಅಕ್ಟೋಬರ್ 18ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಆವರಣದ ಮುಂಭಾಗದಿಂದ ಮ್ಯಾರಥಾನ್ ಆರಂಭವಾಗಲಿದೆ. ಬೆಳಿಗ್ಗೆ 10 ಗಂಟೆಗೆ ವರನಟ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಕವಿಗೋಷ್ಠಿ ನಡೆಯಲಿದೆ. ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಆವರಣದ ಮುಖ್ಯ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮ, ಸಂಜೆ 4 ಗಂಟೆಗೆ ಯುವ ಸಂಭ್ರಮ ಹಾಗೂ ಸಂಜೆ 6 ರಿಂದ ರಾತ್ರಿ 9.45 ಗಂಟೆಯವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 19ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಆವರಣದಿಂದ ಪಾರಂಪರಿಕ ನಡಿಗೆ ಪ್ರಾರಂಭಗೊಳ್ಳಲಿದೆ. ಬೆಳಿಗ್ಗೆ 10 ರಿಂದ ಸಂಜೆ 6.30 ಗಂಟೆಯವರೆಗೆ ವರನಟ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಆವರಣದ ಮುಖ್ಯ ವೇದಿಕೆಯಲ್ಲಿ ಬೆಳಿಗ್ಗೆ 10 ರಿಂದ ರಾತ್ರಿ 9.45 ಗಂಟೆಯವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಸಮಾರೋಪ ಸಮಾರಂಭವು ಸಹ ನಡೆಯಲಿದೆ.