ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಾಗಿ 30 ವರ್ಷ ತುಂಬಿದ ಹಿನ್ನಲೆಯಲ್ಲಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಸಂಭ್ರಮಾಚರಣೆ’ ಮಾಡಲಾಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು
ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು
ಕಾರ್ಯಕ್ರಮ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಚಾಮರಾಜನಗರ ಜಿಲ್ಲೆಯಾಗಿ 30 ವರ್ಷಗಳ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಸೇನಾಪಡೆ ವತಿಯಿಂದ ಪಟಾಕಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗಿದೆ ಎಂದರು.
ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರ ಅವಧಿಯಲ್ಲಿ ಚಾಮರಾಜನಗರ ಜಿಲ್ಲೆಯಾಗಲು ಕನ್ನಡ ಚಳವಳಿಗಾರ ವಾಟಾಳ್ ನಾಗರಾಜು, ಮಾಜಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್, ಹೆಚ್.ನಾಗಪ್ಪ,
ಶಾಸಕ ಎ.ಆರ್.ಕೃಷ್ಣಮೂರ್ತಿ, ಮಾಜಿ ಶಾಸಕ ಎಸ್.ಜಯಣ್ಣ ಕಾರಣರಾಗಿದ್ದಾರೆ. ಜಿಲ್ಲೆಯು ಅಭಿವೃದ್ಧಿ ಹೊಂದಬೇಕಿದೆ ಎಂದರು.
ಈ ಸಂದರ್ಭದಲ್ಲಿ ನಿಜಧ್ವನಿ ಗೋವಿಂದರಾಜು, ಅಮಚವಾಡಿ ರಾಜು, ರಾಚಪ್ಪ, ತಾಂಡವಮೂರ್ತಿ, ಹೊಂಗನೂರು ಕೆಂಪರಾಜು, ಸುರೇಶ್ ಗೌಡ, ಶಿವಣ್ಣ ಹೊಸೂರು, ಆಟೋ ಲಿಂಗರಾಜು, ಶಿವು, ಆಟೋ ಸುರೇಶ್, ನಂಜುಂಡಶೆಟ್ಟಿ, ಮಹೇಶ್ ಗೌಡ, ಪರಿಸರ ನಾಗರಾಜು ಇತರರು ಹಾಜರಿದ್ದರು.
