ಚಾಮರಾಜನಗರದ ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಪುತ್ರ ವಿಯೋಗ

ಹಿರಿಯ ಮಗ ಪಿ.ಚಾಮರಾಜ್ ನಿಧನ

ಒಂದೂವರೆ ತಿಂಗಳಿನಿಂದ ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜ್

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್‍ಐಎಲ್ ಅಧ್ಯಕ್ಷರಾದ ಸಿ.ಪುಟ್ಟರಂಗಶೆಟ್ಟಿ ಅವರ ಹಿರಿಯ ಮಗ ಪಿ.ಚಾಮರಾಜ್ (42) ಸೋಮವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಒಂದೂವರೆ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಅವರಿಗೆ ಪತ್ನಿ ಇಬ್ಬರು ಮಕ್ಕಳು, ಓರ್ವ ಸಹೋದರ, ಇಬ್ಬರು ಸಹೋದರಿಯರು, ಬಂಧು ಬಳಗ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.

ಇವರ ಪಾರ್ಥೀವ ಶರೀರವನ್ನು ಸೋಮವಾರ ಸಂಜೆ ಯಳಂದೂರು ತಾಲೂಕಿನ ಸ್ವಗ್ರಾಮ ಉಪ್ಪಿನ ಮೋಳೆಗೆ ತರಲಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *