ಚಾಮರಾಜನಗರ ಸಂಸದ ಸುನೀಲ್ ಬೋಸ್ ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ವಿತರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರು ಕುಟುಂಬಸ್ಥರ ಮನೆಗಳಿಗೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಸಂಸದ ಸುನೀಲ್ ಬೋಸ್ ಭೇಟಿ ನೀಡಿ ಸಾಂತ್ವನ ಹೇಳಿದರು.

ಹನೂರು ತಾಲೂಕಿನ ತೋಮಿಯರ್ ಪಾಳ್ಯ, ಮರಿಯಮಂಗಲ ಮತ್ತು ಲಾಸರ್ ದೊಡ್ಡಿ ಗ್ರಾಮಗಳಿಗೆ ಭೇಟಿ ನೀಡಿದ ಸಂಸದರು ಮೃತ ಜಾನ್ ರೋಸ್ ಪೀಟರ್, ಸಬಸ್ಟಿಯನ್ ಡೇವಿಡ್ ಕುಮಾರ್ ಮತ್ತು ಆಂತೋಣಿ ಸ್ವಾಮಿ ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು.

ಈ ವೇಳೆ ಮೃತಪಟ್ಟ ಕುಟುಂಬಸ್ಥರಿಗೆ ವೈಯಕ್ತಿಕವಾಗಿ ತಲಾ 1 ಲಕ್ಷ ರೂ. ಪರಿಹಾರವನ್ನು ಸಂಸದ ಸುನೀಲ್ ಬೋಸ್ ನೀಡಿದರು.

ಈ ವೇಳೆ ಮಾಜಿ ಶಾಸಕ ಆರ್. ನರೇಂದ್ರ, ಚಾಮುಲ್ ನಿರ್ದೇಶಕ ಶಾಹುಲ್ ಅಹಮದ್,ಕಾಂಗ್ರೆಸ್ ಜಿಲ್ಲಾ ವಕ್ತಾರ ಮಧುವನಹಳ್ಳಿ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೊಪ್ಪಳಿ ಮಹದೇವ ನಾಯಕ, ಮುಖಂಡರಾದ ಮಂಗಲ ಪುಟ್ಟರಾಜು ಚೇತನ್ ದೊರೆರಾಜು, ಯುವ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಸಂಜಯ್, ಸೇರಿದಂತೆ ಇನ್ನಿತರರು ಹಾಜರಿದ್ದರು

Leave a Reply

Your email address will not be published. Required fields are marked *