ಚಾಮರಾಜನಗರ ನಗರಸಭೆ ವತಿಯಿಂದ ಅನಧಿಕೃತ ಪ್ಲೆಕ್ಸ್, ಬ್ಯಾನರ್ ತೆರವು

ಚಾಮರಾಜನಗರ : ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್, ಬ್ಯಾನರ್‌ಗಳನ್ನು   ನಗರಸಭೆ ವತಿಯಿಂದ ತೆರವುಗೊಳಿಸಲಾಯಿತು.
ನಗರಸಭಾ ಪೌರಾಯುಕ್ತ ಪರಶುರಾಮ ಛಲವಾದಿ ಅವರ  ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ನಗರ ಭುವನೇಶ್ವರಿ ವೃತ್ತ, ಜೋಡಿರಸ್ತೆ, ಇತರ ಕಡೆಗಳಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಪೈಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಸಂತೋಷಕುಮಾರ್, ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ, ಸಿ.ಡಿ.ವೆಂಕಟೇಶ್, ಚೇತನ್, ಮಣಿಕಂಠನಾಯಕ, ಪ್ರಸಾದ್ ಕುಮಾರ್, ನಿತಿನ್ ಕುಮಾರ್, ಪೊಲೀಸ್ ಪೇದಗಳು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *