ಚಾಮರಾಜನಗರ ವಿ.ವಿ : ಚಿನ್ನದ ಪದಕ ವಿಜೇತ, ಸಾಧಕರಿಗೆ ಸನ್ಮಾನ

ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾನಿಲಯದ ಕನ್ನಡ ಮತ್ತು ಜಾನಪದ ವಿಭಾಗದ ವತಿಯಿಂದ ಇಂದು ವಿಶ್ವವಿದ್ಯಾನಿಲಯದಲ್ಲಿರುವ ಸುವರ್ಣಗಂಗೋತ್ರಿಯ ನಿಜಗುಣ ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಕಿರಿಯ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಮತ್ತು ಚಿನ್ನದ ಪದಕಗಳನ್ನು ಪಡೆದ ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂದರ್ಶಕ ಪ್ರಾಧ್ಯಾಪಕರಾದ ಪೆÇ್ರ. ಕೃಷ್ಣಮೂರ್ತಿ ಹನೂರು ಅವರು ವಿದ್ಯಾರ್ಥಿಗಳು ತಮ್ಮ ಬದುಕುಗಳನ್ನು ಕಟ್ಟಿಕೊಳ್ಳಲು ಚಾಮರಾಜನಗರ ವಿ.ವಿ. ಯಲ್ಲಿ ಉತ್ತಮ ವಾತಾವರಣವಿದ್ದು ಅಧ್ಯಾಪಕರು ನೀಡುವ ಮಾರ್ಗದರ್ಶನದೊಂದಿಗೆ ಪರಿಶ್ರಮದಿಂದ ಅಧ್ಯಯನ ಮಾಡಿದ್ದೇ ಆದಲ್ಲಿ ಯಶಸ್ಸನ್ನು ಸಾಧಿಸಬಹುದಾಗಿದೆ. ಕನ್ನಡ ವಿಭಾಗದ ವಿದ್ಯಾರ್ಥಿಗಳು ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ಚಿನ್ನದ ಪದಕಗಳನ್ನು ಮತ್ತು ನಗದು ಬಹುಮಾನಗಳನ್ನು ಪಡೆದುಕೊಂಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಜೊತೆಗೆ ಸರ್ಕಾರಿ ಹುದ್ದೆಗಳನ್ನು ಸಹ ಪಡೆದುಕೊಂಡಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕುಪ್ನಳ್ಳಿ ಬೈರಪ್ಪ ಅವರು ಕನ್ನಡ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗದ ಅವಕಾಶಗಳಿದ್ದು, ಸರ್ಕಾರದ ಎಲ್ಲಾ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಕನ್ನಡ ಸಾಮಾನ್ಯ ಪತ್ರಿಕೆಯಾಗಿ, ಕಡ್ಡಾಯ ಕನ್ನಡ ಪತ್ರಿಕೆಯಾಗಿ ಹಾಗೂ ಮುಖ್ಯ ಪತ್ರಿಕೆಯಾಗಿ ಕನ್ನಡ ಭಾμÉ ಮತ್ತು ಸಾಹಿತ್ಯದ ಪಠ್ಯಕ್ರಮಗಳಿವೆ. ವಿದ್ಯಾರ್ಥಿಗಳು ಆಳವಾದ ಅಧ್ಯಯನ ಮಾಡಿ ಜ್ಞಾನವನ್ನು ಪಡೆದುಕೊಂಡು ಗುರಿ ತಲುಪಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪೆÇ್ರ. ಎಂ.ಆರ್. ಗಂಗಾಧರ್ ಅವರು ವಿದ್ಯಾರ್ಥಿಗಳಲ್ಲಿ ಶಿಸ್ತು, ಪರಿಶ್ರಮ ಹಾಗೂ ಭವಿಷ್ಯದ ಬಗೆಗೆ ನಿಖರವಾದ ಯೋಜನೆಗಳಿದ್ದರೆ ಯಶಸ್ವಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಾಧನೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಸನ್ಮಾನ ಸ್ವೀಕರಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಚಂದನ ಅವರು ತರಗತಿಗಳಲ್ಲಿ ಉತ್ತಮ ಹಾಗೂ ಗುಣಮಟ್ಟದ ಬೋಧನೆ, ಗುರುಗಳ ಮಾರ್ಗದರ್ಶನ ಹಾಗೂ ಇಲ್ಲಿನ ಗ್ರಂಥಾಲಯ ನನ್ನ ಸಾಧನೆ ಸ್ಪೂರ್ತಿಯಾಯಿತು ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಬಸವಣ್ಣ ಮೂಕಹಳ್ಳಿ, ಜಾನಪದ ವಿಭಾಗದ ಮುಖ್ಯಸ್ಥ ಡಾ ಶಿವರಾಜು, ಉಪನ್ಯಾಸಕರಾದ ಡಾ. ಮಹೇಶ್ ಬಾಬು, ಬಿ. ಗುರುರಾಜು, ಪಿ. ರಾಣಿ, ಡಾ. ಆರ್. ಶಶಿಕಲಾ, ಡಾ. ಜಗದೀಶ್, ಡಾ. ಆರ್. ಮಹೇಶ್, ಚಿನ್ನದ ಪದಕ ವಿಜೇತರಾದ ತೇಜಸ್ವಿನಿ ಆರ್, ಮಣಿಕಂಠ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.

Leave a Reply

Your email address will not be published. Required fields are marked *