- ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ
ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ’ ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು.
ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.