ಚಾಮರಾಜನಗರ ನೂತನ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ಓಣಿಕೇರಿ ಅವರಿಗೆ ಸನ್ಮಾನ

ಚಾಮರಾಜನಗರ : ಚಾಮರಾಜನಗರ ವಲಯ ಅರಣ್ಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಮಂಜುನಾಥ್ ಓಣಿಕೇರಿ ಅವರನ್ನು ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ನಗರದ ಗಾಳೀಪುರ ಬಡಾವಣೆಯಲ್ಲಿರುವ ಚಾಮರಾಜನಗರ ಪ್ರಾದೇಶಿಕ ವಲಯದ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆಲೂರುಮಲ್ಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವನಪುರ ರಾಜಶೇಖ‌ರ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಅವರಿಗೆ ಶಾಲು ಹೊದಿಸಿ, ಹಾರಹಾಕಿ, ಫಲತಾಂಬೂಲ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿಯ ಯಳಂದೂರು ತಾಲೂಕು ಅಧ್ಯಕ್ಷ ಕೆಸ್ತೂರುಮರಪ್ಪ, ಕುರುಬ ಸಮುದಾಯ ಮುಖಂಡ ಮಹೇಶ್, ಗುರುಸಿದ್ದ ಶೆಟ್ಟಿ, ರಾಜಣ್ಣ, ಸುಬ್ಬಣ್ಣ ಹಾಜರಿದ್ದರು.

Leave a Reply

Your email address will not be published. Required fields are marked *