ಚಾಮರಾಜನಗರ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಚಿವಾಲಯದ ಅಲಿಮ್ಕೋ ಸಂಸ್ಥೆ ನೇತೃತ್ವದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ಸೌಲಭ್ಯ ಒದಗಿಸುವ ಸಂಬAಧ ತಪಾಸಣಾ ಶಿಬಿರವನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಕ್ಟೋಬರ್ 9 ರಿಂದ 16 ರವರೆಗೆ ಏರ್ಪಡಿಸಲಾಗಿದೆ.
ಅಕ್ಟೋಬರ್ 9ರಂದು ಚಾಮರಾಜನಗರದ ಸತ್ತಿ ರಸ್ತೆಯ ಸರ್ಕಾರಿ ಬಾಲಕಿಯರ ಫ್ರೌಡಶಾಲೆ, 10ರಂದು ಗುಂಡ್ಲುಪೇಟೆ ಊಟಿ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, 14ರಂದು ಯಳಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು, 15ರಂದು ಹನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ಷೇತ್ರ ಸಂಪನ್ಮೂಲ ಕೇಂದ್ರ, 16ರಂದು ಕೊಳ್ಳೇಗಾಲದ ಸರ್ಕಾರಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ತಪಾಸಣೆಗೆ ಬರುವ ಫಲಾನುಭವಿಗಳು ಯುಡಿಯಡಿ ಕಾರ್ಡ್, ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಬಿಪಿಎಲ್ ಪಡಿತರ ಚೀಟಿ, ಭಾವಚಿತ್ರ ಸೇರಿದಂತೆ ಮೂಲ ದಾಖಲಾತಿಗಳೊಂದಿಗೆ ಶಿಬಿರಕ್ಕೆ ಬರಬೇಕು. ಮಾಹಿತಿಗಾಗಿ ಚಾಮರಾಜನಗರ ಎಂ.ಆರ್.ಡಬ್ಲೂö್ಯ 8073716208, ಕೊಳ್ಳೇಗಾಲ ಮತ್ತು ಹನೂರು ಎಂ.ಆರ್.ಡಬ್ಲೂö್ಯ 7892715408, ಗುಂಡ್ಲುಪೇಟೆ ಎಂ.ಆರ್.ಡಬ್ಲೂö್ಯ 9742423332, ಯಳಂದೂರು ಎಂ.ಆರ್.ಡಬ್ಲೂ 7940164149 ಹಾಗೂ ತಾಲ್ಲೂಕು ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ ದೂ.ಸಂ 08226-223688 ಮತ್ತು ಮಾಹಿತಿ ಸಲಹಾ ಕೇಂದ್ರ ದೂ.ಸಂ 08226-224688 ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Like this:
Like Loading...
Related