ನಗರದಲ್ಲಿ ಅರ್ಥಪೂರ್ಣವಾಗಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಛತ್ರಪತಿ ಶಿವಾಜಿ ಜಯಂತಿ ಆಚರಣೆ ಇಂದು ಅರ್ಥಪೂರ್ಣವಾಗಿ ನಗರದಲ್ಲಿ ನಡೆಯಿತು. 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮವನ್ನು ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ ಅವರು ಉದ್ಘಾಟಿಸಿ ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. 

ನಂತರ ಮಾತನಾಡಿದ ಮಹಮ್ಮದ್ ಅಸ್ಗರ್ ಮುನ್ನಾ ಅವರು ಶಿವಾಜಿ ಅವರು ದೇಶ ಕಂಡ ಮಹಾನ್ ಹೋರಾಟಗಾರರು. ಶಿವಾಜಿ ಅವರ ಕೊಡುಗೆ ಅಪಾರವಾಗಿದೆ. ಶೌರ್ಯದಿಂದ ಸೇನೆಯನ್ನು ಮುನ್ನಡೆಸಿ ದೇಶಕ್ಕಾಗಿ ಹೋರಾಟ ನಡೆಸಿದ್ದಾರೆ ಎಂದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ ದೇಶ ಪ್ರೇಮ ಸಾಹಸಕ್ಕೆ ಮತ್ತೊಂದು ಹೆಸರೇ ಶಿವಾಜಿ. ಶಿವಾಜಿ 15ನೇ ವಯಸ್ಸಿನಲ್ಲೇ ಯುದ್ದವನ್ನು ಮಾಡಿದವರು ಎಂದು ಇತಿಹಾಸ ತಿಳಿಸುತ್ತದೆ. ಬ್ರೀಟಿಷರು ಆಳ್ವಿಕೆ ನಡೆಸುತ್ತಿದ್ದ ಸಂಧರ್ಭದಲ್ಲಿ ಶಿವಾಜಿಯು ತಮ್ಮ ಕಡಿಮೆ ಸೈನ್ಯದಿಂದ ವೀರಸೇನೆ ಕಟ್ಟಿದರು ಎಂದರು.

ಶಿವಾಜಿ ಅವರ ಯುದ್ದ ತಂತ್ರಗಾರಿಕೆ, ಸ್ವಾಭಿಮಾನ, ದೇಶಭಕ್ತಿ, ಕೌಶಲ್ಯದಿಂದ ಹೆಸರಾಗಿದ್ದಾರೆ. ಅವರ ಸಾಹಸ ಎಲ್ಲರಿಗೂ ಪ್ರೇರಣೆಯಾಗಿದೆ. ಶಿವಾಜಿ ಅವರು ಸಾಮ್ರಾಜ್ಯವನ್ನು ಕಟ್ಟಲು ಅವರ ತಾಯಿಯು ಪ್ರೇರಣೆಯಾಗಿದ್ದರು. ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ದೇಶಭಕ್ತಿ, ಸ್ವಾಭಿಮಾನ, ರಾಷ್ರಪ್ರೇಮವನ್ನು ಬೆಳಸಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಉದಯ್ ಕುಮಾರ್, ವೆಂಕಟರಾವ್ ಸಾಠೆ, ಸಮುದಾಯ ಮುಖಂಡರು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *