ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿ ಡಿಕೆಶಿ

  • ಕೊಳ್ಳೇಗಾಲ, ಹನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ

ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲಕ್ಕೆ ಭೇಟಿ ನೀಡುತ್ತಿದ್ದು ಸೆ.30ರಂದು ಜಿಲ್ಲಾಡಳಿತ, ಜಿಪಂ ವತಿಯಿಂದ ಆಯೋಜಿಸಿರುವ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭೆ
ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಸವಲತ್ತುಗಳ ವಿತರಣೆ ಮಾಡಲಿದ್ದಾರೆ ಎಂದು ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆಮಹದೇಶ್ವರಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ 18 ಇಲಾಖೆಗಳಿಗೆ ಸಂಬAಧಿಸಿದAತೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಸೆ.30ರಂದು ಬೆಳಗ್ಗೆ 11 ಕ್ಕೆ ಕೊಳ್ಳೇಗಾಲದ ಎಂ.ಜಿ.ಎಸ್.ವಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದರು.

35 ಕೋಟಿ ವೆಚ್ಚದಲ್ಲಿ ಯಳಂದೂರಿನ 100 ಹಾಸಿಗೆ ಆಸ್ಪತೆ, 65 ಲಕ್ಷ ರೂ.ವೆಚ್ಚದ ದಾದಿಯರ ವಸತಿಗೃಹನಿರ್ಮಾಣ ಸೇರಿದಂತೆ 10
ಅಭಿವೃದ್ದಿಕಾಮಗಾರಿಗಳ ಉದ್ಘಾಟನೆ, 27 ಅಭಿವೃದ್ದಿಕಾಮಗಾರಿಗಳಿಗೆ ಶಂಕುಸ್ಥಾಪನೆ, ಹನೂರುವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹನೂರು ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ. ಪಿಜಿಪಾಳ್ಯ. ದೊಡ್ಡಿಂದುವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಿಎಂಸಿಯಾಗಿ ಮೇಲ್ದರ್ಜೆಗೇರಿಸಿರುವ ಕಟ್ಟಡ ಉದ್ಘಾಟನೆ, ಮೂರುಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ಜಿಲ್ಲೆಗೆ ಶಾಶ್ವತ ನೀರಾವರಿ ಒದಗಿಸುವ ಸಂಬAಧ 900 ಕೋಟಿ ರೂ.ಗಳ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಿಎಂರಿ0ದ ಅನುಮೋದನೆ ಸಿಗುವ ನಿರೀಕ್ಷೆಇದೆ ಎಂದರು.

ಯಳ0ದೂರು ಅಗರಮಾಂಬಳ್ಳಿ ಕೆರೆಯಿಂದ ಬೆಂಗಳೂರು-ಡಾಬಸ್‌ಪೇಟೆ ಕೈಗಾರಿಕೆಗಳಿಗೆ ನೀರುಒದಗಿಸುವ 839 ಕೋಟಿ ರೂ. ವೆಚ್ಚದ ಯೋಜನೆಗೆ ಸಿಎಂ ಭೂಮಿಪೂಜೆ ನೆರವೇರಿಸಲಿದ್ದಾರೆ. ಕೊಳ್ಳೇಗಾಲ ಮತ್ತು ಹನೂರು ವಿಧಾನಸಭೆ ಕ್ಷೇತ್ರದ 1ಸಾವಿರ ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಲಿದೆ ಎಂದರು.
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಪಶುಸಂಗೋಪನೆ, ರೇಷ್ಮೆ, ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸವಲತ್ತು ವಿತರಣೆ ಮಾಡುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಸರ್ಕಾರದ 14 ಇಲಾಖೆಗಳ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಸದ ಸುನೀಲ್ ಬೋಸ್, ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್.ಮAಜುನಾಥ, ಡಾ. ಡಿ. ತಿಮ್ಮಯ್ಯ, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸುವರು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ.ಯೋಗೇಶ, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಮುಖಂಡರಾದ ನಂಜೇಗೌಡ, ಮಾಂಬಳ್ಳಿ ಮಜು ಹಾಜರಿದ್ದರು.

Leave a Reply

Your email address will not be published. Required fields are marked *