ಚಾಮರಾಜನಗರ: ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 30ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಕಾಲೇಜು ಮೈದಾನದ ಹೆಲಿಪ್ಯಾಡ್ ಗೆ ಆಗಮಿಸುವರು. ಬಳಿಕ ಕೊಳ್ಳೇಗಾಲ ಪಟ್ಟಣದ ಎಂಜಿಎಸ್‍ವಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿರುವ ಜಿಲ್ಲೆಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು.
Related