ಚಾಮರಾಜನಗರ: ಬಾಲ ಪ್ರತಿಭೆಗಳು ಹೆಮ್ಮರವಾಗಿ ಬೆಳೆಯಲು ಚಿಗುರು ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ ಅವರು ತಿಳಿಸಿದರು.
ನಗರದ ಪಿ.ಡಬ್ಲ್ಯೂ.ಡಿ ಕಾಲೋನಿಯಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳಲ್ಲಿರುವ ಕಲಾಪ್ರತಿಭೆಯನ್ನು ಪ್ರೋತ್ಸಾಹಿಸುವ ಮಕ್ಕಳ ಹಬ್ಬ ‘ಚಿಗುರು-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಾನಪದ ಕಲೆಗಳ ತವರೂರು ಚಾಮರಾಜನಗರ ಜಿಲ್ಲೆಯಲ್ಲಿ ಸಾಕಷ್ಟು ಕಲಾಪ್ರತಿಭೆಗಳಿದ್ದಾರೆ. ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಮಾಡಿದ ಕಲಾವಿದರಿದ್ದಾರೆ. ಅವರುಗಳನ್ನು ಮಾದರಿಯಾಗಿಸಿಕೊಂಡು ಬಾಲ ಪ್ರತಿಭೆಗಳು ಬೆಳೆಯಬೇಕು. ಉನ್ನತ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಬೇಕು. ಜಿಲ್ಲೆಯಲ್ಲಿ ಬಾಲ ಪ್ರತಿಭೆಗಳು ಹೆಮ್ಮರವಾಗಿ ಬೆಳೆಯಲು ಇಲಾಖೆ ಆಯೋಜಿತ ಚಿಗುರು ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದರು.
ದೈನಂದಿನ ಪಾಠ, ಪ್ರವಚನಗಳ ಜೊತೆಗೆ ಪ್ರಾಥಮಿಕ ಹಂತದಿಂದಲೇ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಿಗಿಸಿಕೊಳ್ಳಲು ಮಕ್ಕಳನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಪ್ರೇರೇಪಿಸಬೇಕು. ಮಕ್ಕಳಲ್ಲಿರುವ ಕಲಾಪ್ರತಿಭೆಯನ್ನು ಹೊರತರಲು ರಾಜ್ಯಸರ್ಕಾರ ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಮಕ್ಕಳು ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ ಅವರು ತಿಳಿಸಿದರು.
ಜಾನಪದ ಗಾಯಕರಾದ ಸಿ.ಎಂ. ನರಸಿಂಹಮೂರ್ತಿ ಅವರು ಮಾತನಾಡಿ ಕನ್ನಡ ಸಂಸ್ಕøತಿ ಇಲಾಖೆ ಜಿಲ್ಲೆಯಲ್ಲಿ ಕಲೆ, ಸಾಹಿತ್ಯ, ಸಂಸ್ಕøತಿ ವೃದ್ದಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಜಿಲ್ಲಾದ್ಯಂತ ಏರ್ಪಡಿಸುತ್ತಿದೆ. ಸರ್ಕಾರವು ಚಿಗುರು ಕಾರ್ಯಕ್ರಮ ಆಯೋಜನೆ ಮೂಲಕ ಗಡಿಜಿಲ್ಲೆಯ ಕಲಾವಿದರನ್ನು ಪ್ರೋತ್ಸಾಹಿಸುತ್ತಿದೆ. ಮಲೆ ಮಹದೇಶ್ವರ, ಮಂಟೇಸ್ವಾಮಿಯವರಂತಹ ಸಿದ್ಧ ಪುರುಷರು ನಡೆದಾಡಿದ ಈ ನೆಲದಲ್ಲಿ ಅನೇಕ ಕಲಾಪ್ರತಿಭೆಗಳಿವೆ. ಪೋಷಕರು ಬೆಳೆಯುವ ಪೈರನ್ನು ಮೊಳಕೆಯಲ್ಲಿ ಗುರುತಿಸಿ ಪ್ರತಿಭೆಗೆ ಪೂರಕವಾಗಿ ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆಯ ಸಿ.ಆರ್.ಪಿ. ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ವೇಳೆ ಆರಂಭದಲ್ಲಿ ಗಾಯನ ಕಾರ್ಯಕ್ರಮ ನಡೆಸಿಕೊಟ್ಟ ಸರಿಗಮಪ ಜ್ಯೂರಿ ಜಿಲ್ಲೆಯ ಆರ್. ಮಹೇಂದರ್ ಅವರ ಶಿಷ್ಯ ಬಾಲ ಪ್ರತಿಭೆ ಪುಣ್ಯಚರಣ್ ಮತ್ತು ತಂಡದವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜು, ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಾಲಿನಿ, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಸುರೇಶ್‍ಕುಮಾರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಂದರ್, ಕಲೆ ನಟರಾಜು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ಬಳಿಕ ಬಾಲ ಪ್ರತಿಭೆಗಳಿಂದ ಶಾಸ್ತೀಯ ಸಂಗೀತ, ಸುಗಮ ಸಂಗೀತ, ನಾಟಕ, ಜನಪದ ಗೀತೆ, ಸಮೂಹ ನೃತ್ಯ ಕಾರ್ಯಕ್ರಮಗಳು ನಡೆದವು.