ಚಾಮರಾಜನಗರ: ಮಕ್ಕಳು ತಮಗೆ ಸಿಗುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಪ್ರತಿಭೆಯನ್ನು ಹೊರಚೆಲ್ಲಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ತಿಳಿಸಿದರು.
ನಗರದ ಜೋಡಿ ರಸ್ತೆಯಲ್ಲಿರುವ ರೋಟರಿ ಭವನದಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಗಿಡಕ್ಕೆ ನೀರೆರೆದು ನಂತರ ಮಾತನಾಡಿದ ಅವರು, ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಉನ್ನತಿ ಫೌಂಡೇಷನ್ ಸೂಕ್ತ ವೇದಿಕೆ ಕಲ್ಪಿಸಿಕೊಟ್ಟಿದ್ದರು. ಉನ್ನತಿ ಫೌಂಡೇಷನ್ ವತಿಯಿಂದ ೧೫ ದಿನಗಳಿಂದ ಆಯೋಜಿಸಲಾಗಿದ್ದ ಉಚಿತ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಉಚಿತ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನೂರಾರು ಮಕ್ಕಳು ಭಾಗವಹಿಸಿ ಈ ಸೌಲಭ್ಯ ಪಡೆದುಕೊಂಡಿದ್ದೀರಾ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುನಿರಾಜು ಅವರು, ಶಿಬಿರದಲ್ಲಿ ಭಾಗವಹಿಸಿದ ಪುಟಾಣಿ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿ, ಪೋಷಕರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಿಮ್ಮ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.
ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ ಬಂಗಾರು, ಕಾಗಲವಾಡಿ ಕ್ಲಸ್ಟರ್ ಸಿಆರ್‌ಪಿ, ಕಿಟ್ಟು, ನಾಗವಳ್ಳಿ ಸಿಆರ್‌ಪಿ ಸೋಮಣ್ಣ, ರೈತ ಮುಖಂಡ ತೊರೆವಳ್ಳಿ, ಟಿ ಪಿ ಸ್ವಾಮಿ, ಜ್ಯೋತಿಗೌಡನಪುರ ಸಮಾಜ ಸೇವಕ ವೀರಣ್ಣ, ಉಪ್ಪಾರ ಮುಖಂಡ ಬಾಗಳಿ ರೇವಣ್ಣ, ಹಿಂದಿ ಶಿಕ್ಷಕಿ ಮೀರಾಮೂರ್ತಿ, ಅನುಪಮ ಟ್ರಸ್ಟ್ ಅಧ್ಯಕ್ಷೆ ಪ್ರೇಮ, ಗುಂಡ್ಲುಪೇಟೆ ನಿಸರ್ಗ ಟ್ರಸ್ಟ್ ಅಧ್ಯಕ್ಷ ನಾಗರಾಜು, ಉನ್ನತ ಫೌಂಡೇಶನ್ ಅಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ನಂದಿನಿ, ಉಪಾಧ್ಯಕ್ಷ ಶಿವಕುಮಾರ್, ಪರಿಸರ ಪ್ರೇಮಿ ಕಾಗಲವಾಡಿ ಮೊಳೆ ಸುಂದರ್ ಸೇರಿದಂತೆ ಮತ್ತಿತರರಿದ್ದರು.