ಪ್ರಕಾಶ ಭವನದಲ್ಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

ಚಾಮರಾಜನಗರ: ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಪ್ರಕಾಶ ಭವನದಲ್ಲಿ ಮಕ್ಕಳ ಸಂಭ್ರಮದ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮನೋಬಲ ತರಬೇತುದಾರೆ ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀ ಮಕ್ಕಳಲ್ಲಿ ಸಕಾರಾತ್ಮಕ ಚಿಂತನೆ ಬೆಳೆಸುವಲ್ಲಿ ಹಾಗೂ ಮಕ್ಕಳಲ್ಲಿ ವ್ಯಕ್ತಿತ್ವ ರೂಪಿಸುವಲ್ಲಿ ರಾಜಯೋಗ ಶಿಕ್ಷಣ ಹಾಗೂ ಬೇಸಿಗೆ ಶಿಬಿರಗಳು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಶಿಬಿರವು ವ್ಯಕ್ತಿತ್ವ ವಿಕಸನ, ಮಕ್ಕಳ ವ್ಯಕ್ತಿತ್ವ ಬೆಳವಣಿಗೆ, ನಡವಳಿಕೆ, ಬಾವ ಮತ್ತು ವರ್ತನೆಗಳನ್ನು ರೂಪಿಸುವ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು ಆತ್ಮವಿಶ್ವಾಸ, ಭಾವನಾತ್ಮಕ ಬುದ್ಧಿವಂತಿಕೆ, ಸಹಾನುಭೂತಿ ಮತ್ತು ಸಂವಹನ ಕೌಶಲ್ಯಗಳನ್ನು ನಿರ್ಮಿಸುವುದು ಶಿಬಿರದಲ್ಲಿ ಸೇರಿವೆ. ಸುರಕ್ಷಿತ ಬಾಂಧವ್ಯ ಬೆಳೆಸುವುದು ಸಾಮಾಜಿಕ ಕೌಶಲ್ಯ, ಸಕರಾತ್ಮಕ ಬಲವರ್ಧನೆ, ಒದಗಿಸುವುದು, ಮುಕ್ತ ಸಮ್ಮೂಹನ ಮತ್ತು ಮುಕ್ತ ಆಟಕ್ಕೆ ಅವಕಾಶ ನೀಡುವುದು ಎಂದು ಹೇಳಿದರು.

ಮಕ್ಕಳ ವ್ಯಕ್ತಿತ್ವದ ಬೆಳವಣಿಗೆ ಶಿಬಿರ ಪೂರಕವಾಗಿದೆ. ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಮಕ್ಕಳಿಗೆ ಯೋಗ,ಚಿತ್ರಕಲೆ, ನೈತಿಕ ಶಿಕ್ಷಣ, ನೆನಪಿನ ನಿರ್ವಹಣೆ, ಆರೋಗ್ಯ, ಶ್ಲೋಕ, ವಚನ ಹಾಗೂ ಇನ್ನಿತರ ವಿಷಯಗಳ ಬಗ್ಗೆ ವ್ಯಕ್ತಿತ್ವ ವಿಷಯದ ಬಗ್ಗೆ ಏರ್ಪಡಿಸಲಾಗಿದೆ ಮಕ್ಕಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು.

ಶಿಕ್ಷಕ ಮಹೇಶ್ ಮಾತನಾಡಿ ಸಂಸ್ಥೆ ನೀಡುವ ವ್ಯಕ್ತಿತ್ವ ವಿಕಸನ ಶಿಬಿರ ಯೋಗ,ಆಧ್ಯಾತ್ಮಿಕ ನೀತಿಶಾಸ್ತ್ರ,ಪ್ರಾಯೋಗಿಕ ಮನೋವಿಜ್ಞಾನ, ತತ್ವಶಾಸ್ತ್ರ, ವಿಶ್ವ ಇತಿಹಾಸ ಮತ್ತು ಸಂಸ್ಕೃತಿಯ ಸಾರಾಂಶ, ಸಮಾಜಶಾಸ್ತ್ರ ಮತ್ತು ಹಲವಾರು ಇತರ ವಿಷಯಗಳ ಮಿಶ್ರಣವಾಗಿದೆ. ಈ ಸಂಸ್ಥೆಯು ಪ್ರತಿಯೊಬ್ಬ ಮಕ್ಕಳಲ್ಲಿ ಆಂತರಿಕ ಪ್ರತಿಭೆಯನ್ನು ಗುರುತಿಸುತ್ತದೆ. ಮತ್ತು ತಮ್ಮೊಳಗಿನ ವ್ಯಕ್ತಿತ್ವವನ್ನು ಮರುಶೋಧಿಸಲು ಸಹಾಯ ಮಾಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕ ನಾಗರಾಜ್, ಶ್ರೀನಿವಾಸ್, ಆಶಾ, ಓಂ ಶಾಂತಿ ನ್ಯೂಸ್ ಸರ್ವಿಸಸ್ನ ಬಿಕೆ ಆರಾಧ್ಯ ಹಾಜರಿದ್ದರು.

Leave a Reply

Your email address will not be published. Required fields are marked *