ಶಾಸಕ ಸಿ. ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಲು ಕ್ರೈಸ್ತ ಸಮುದಾಯ ಆಗ್ರಹ

ಚಾಮರಾಜನಗರ:  ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು  ಕ್ರೈಸ್ತ ಸಮುದಾಯದ ಮುಖಂಡರು ಆಗ್ರಹಿಸಿದರು.
  ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕ್ರೈಸ್ತ ಸಮುದಾಯ ಮುಖಂಡ, ಚೂಡಾ ಸದಸ್ಯ ಮಸಗಾಪುರ ರಾಜು ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಆ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲು ಮುಂದಾಗಬೇಕು ಎಂದು  ಒತ್ತಾಯಿಸಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟ ಅಭಿಮಾನಿಯಾಗಿರುವ  ಶಾಸಕ ಸಿ.ಪುಟ್ಟರಂಗಶೆಟ್ಟಿ   ಅವರಿಗೆ ಕಳೆದ ಸಚಿವ ಸಂಪುಟದಲ್ಲಿ ಸಚಿವರಾಗುವ ಅವಕಾಶವಿದ್ದು, ಸಚಿವ ಸ್ಥಾನದಿಂದ ವಂಚಿತರಾದರು. ಈ ಬಾರಿಯ ಪುನರ್ ಸಚಿವ ಸಂಪುಟದಲ್ಲ
ಅವರಿಗೆ ಸಚಿವ ಸ್ಥಾನ ನೀಡಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ   ಚಾಮರಾಜನಗರ ವಲಯ ಪ್ರಾಂತ್ಯ ಉಪಾಧ್ಯಕ್ಷ ಸುಜೇಂದ್ರ ಡೆಕ್ಲಾಸ್,  ರೆ.ದೇಬೋರಾ ಶಾಂತಕುಮಾರಿ, ಪೃಥ್ವಿದಾಸ್, ಕಾಂತರಾಜು, ಹಾಲ್ವಿನ್, ಸುನಂದರಾಜು ಹಾಜರಿದ್ದರು.

Leave a Reply

Your email address will not be published. Required fields are marked *