ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪೌರಕಾರ್ಮಿಕರಿಂದ ಸನ್ಮಾನ

ಕವಿ ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿ ವಿಚಕ್ಷಣಾ ಸಮಿತಿ ಸದಸ್ಯ ಸಿ.ಶಂಕರ ಅಂಕನಶೆಟ್ಟಿಪುರ ಅವರಿಂದ ಅಭಿನಂದನೆ
ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಾಲಿನ ಬಜೆಟ್‍ನಲ್ಲಿ 20500 ಮಂದಿ ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದ ಪೌರಕಾರ್ಮಿಕರ ಪರವಾಗಿ ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.

ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮರಾಜನಗರ ಜಿಲ್ಲೆಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರನ್ನು ಹಾರ, ಶಾಲು ಹಾಕುವ ಮೂಲಕ ಆತ್ಮೀಯವಾಗಿ ಅಭಿನಂದಿಸಲಾಯಿತು.

ಕವಿ ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿ ವಿಚಕ್ಷಣಾ ಸಮಿತಿ ಸದಸ್ಯ ಸಿ.ಶಂಕರ ಅಂಕನಶೆಟ್ಟಿಪುರ ಅವರನ್ನು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡುವಂತೆ ಪೌರಕಾರ್ಮಿಕರು ಇದೇ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹಾನಗರಪಾಲಿಕೆ ನಗರಸಭೆ, ಪುರಸಭೆ, ಪೌರಕಾರ್ಮಿಕರ ಮಹಾಸಂಘದ ಸದಸ್ಯರಾದ ರಾಜೇಂದ್ರ .ಎಂ., ರಾಜು, ಎಂ.ಮಂಜು, ಮಹದೇವ್, ಸಮತ ಸೈನಿಕ ದಳ(ಡಿಎಸ್‍ಎಸ್)ದ ಜಿಲ್ಲಾಧ್ಯಕ್ಷ ಸಂಘಸೇನಾ, ಮತ್ತಿತರರಿದ್ದರು.

Leave a Reply

Your email address will not be published. Required fields are marked *