ಹನೂರು: ಪೌರಕಾರ್ಮಿಕರು ತಮ್ಮ ಆರೋಗ್ಯ ಹಾಗೂ ಕ್ಷೇತ್ರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ ಎಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ರಘು ತಿಳಿಸಿದರು.
ಪೌರಕಾರ್ಮಿಕರೊಂದಿಗೆ ಸಭೆ ನಡೆಸಿದ ಕಾರ್ಯದರ್ಶಿಗಳು, ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಕಾರ್ಮಿಕರಿಗೆ ಬೇಕಾದ ಮಾಸ್ಕ್, ಗ್ಲೌಸ್, ಇನ್ನಿತರೆ ಸಲಕರಣೆಗಳನ್ನು ಪ್ರಾಧಿಕಾರದಿಂದ ನೀಡಲಿದ್ದು, ಕ್ಷೇತ್ರದ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ತಿಳಿಸಿದರು.
ಪೌರಕಾರ್ಮಿಕರು ತಮ್ಮ ಕುಂದುಕೊರತೆಗಳ ಬಗ್ಗೆ ತಿಳಿಸಿದರು. ಸಮಸ್ಯೆಗಳನ್ನು ಆಲಿಸಿದ ಕಾರ್ಯದರ್ಶಿ ರಘು ಅವರು, ಶಿವರಾತ್ರಿ ಜಾತ್ರೆ ಮುಗಿದ ಬಳಿಕ ಸಮಸ್ಯೆ ಸಂಬಂಧಿಸಿದಂತೆ ಸಭೆ ನಡೆಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪೌರಕಾರ್ಮಿಕ ಸಂಘದ ಅಧ್ಯಕ್ಷ ಎಂ.ಪಿ.ಗೋಪಾಲ್, ರಾಜು, ಮೇಸ್ತ್ರಿಗಳಾದ ನಾಗರಾಜು, ರಾಜು, ಪದಾಧಿಕಾರಿಗಳು, ನೌಕರರು ಸಭೆಯಲ್ಲಿದ್ದರು.