ಗುಂಡ್ಲುಪೇಟೆಯಲ್ಲಿ ಸಿಎಂ, ಡಿಸಿಎಂ : 475 ಕೋಟಿ ರೂ.ಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ : ಎಚ್.ಎಂ. ಗಣೇಶ್‌ಪ್ರಸಾದ್

  • ಅಕ್ಸಿಜನ್ ದುರಂತದಲ್ಲಿ ಮೃತಪಟ್ಟಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ಆದೇಶ ಪತ್ರ ವಿತರಣೆ


ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಏ 21 ರಂದು ಮಂಗಳವಾರ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು ಭಾಗವಹಿಸಲಿದ್ದಾರೆ ಎಂದು ಕ್ಷೇತ್ರದ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ 525 ಕೋಟಿ ರೂ. ವೆಚ್ಚಲ್ಲಿ ವಿವಿಧ ಕೆರೆಗಳನ್ನು ತುಂಬಿಸುವುದು ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಗಾಟನೆ ಮತ್ತು ಗುದ್ದಲಿಪೂಜೆ ಕಾರ್ಯಕ್ರಮಗಗಳಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ತಾಲೂಕಿನ ವ್ಯಾಪ್ತಿಯಲ್ಲಿ ಎಪಿಎಂಸಿಯಲ್ಲಿ ಹತ್ತಿ ಮಾರುಕಟ್ಟೆ ಉದ್ಗಾಟನೆ, ವಾಲ್ಮೀಕಿ ಭವನ, ಸಮಾಜ ಕಲ್ಯಾಣ ಇಲಾಖೆಯಿಂದ ಅಂಬೇಡ್ಕರ್ ಹಾಸ್ಟೆಲ್ ಹಾಗೂ ವಿವಿಧ ಇಲಾಖೆಗಳಿಗೆ ಸೇರಿದ ಅಭಿವೃದ್ದಿ ಕಾಮಗಾರಿಗಳು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.
ನಮ್ಮ ತಂದೆಯವರಾದ ದಿ.ಎಚ್. ಎಸ್. ಮಹದೇವಪ್ರಸಾದ್ ಅವರು ಅವಧಿಯಲ್ಲಿ ಅನುಮೋದನೆಗೊಂಡಿದ್ದ ಮುಂದುವರಿದ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಕಳೆದ ಮೂರು ವ಼಼ರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವವೇ ಆರಂಭವಾಗಿದೆ. ಈ ಹಿಂದಿನ ಐದು ವರ್ಷಗಳಲ್ಲಿ ಯಾವುದೇ ಅಭಿವೃದ್ದಿ ಕಾರ್ಯಕ್ರಮಗಳು ನಡೆದಿರಲಿಲ್ಲ. ಕ್ಷೇತ್ರದ 110 ಕೆರೆಗಳಿಗೆ ನೀರು ತುಂಬಿಸುವ ಮೂಲಕ ನಿರಂತರವಾಗಿ ಜನ, ಜಾನುವಾರುಗಳಿಗೆ ಕುಡಿಯುವ ನೀರು ಕಲ್ಪಿಸುವುದು ಹಾಗೂ ಅಂತರ್ಜಲ ವೃದ್ದಿಗೆ ಕ್ರಮ ವಹಿಸಲಾಗಿದೆ. ಅಲ್ಲದೇ ಕ್ಷೇತ್ರದಲ್ಲಿ ಸಮುದಾಯ ಭವನ, ಹಳ್ಳಿಗಳ ಸಂಪರ್ಕ ರಸ್ತೆಗಳ ಅಭಿವೃದ್ದಿ, ರಾಷ್ಟಿçÃಯ ಹೆದ್ದಾರಿಗಳ ಅಭಿವೃದ್ದಿಗೆ ಅದ್ಯತೆ, ಶಿಕ್ಷಣ, ಆರೋಗ್ಯ ಕ್ಷೇತ್ರದ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದು ಗಣೇಶ್ ಪ್ರಸಾದ್ ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ಅಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದ ರೋಗಿಗಳ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಕೊಡಿಸುವ ಕುರಿತು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಭರವಸೆ ನೀಡಿದ್ದರು. ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ಕೊಡಲು ಒಪ್ಪಿಗೆ ನೀಡಿದ್ದರು. ನುಡಿದಂತೆ ಈಗ ನಡೆಯಲಾಗುತ್ತಿದೆ. ನಾಳಿನ ಕಾರ್ಯಕ್ರಮದಲ್ಲಿ ಅಕ್ಸಿಜನ್ ಸಂತಸ್ತರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉದ್ಯೋಗ ನೇಮಕಾತಿ ಪತ್ರವನ್ನು ವಿತರಣೆ ಮಾಡಲಿದ್ದಾರೆ ಎಂದು ಗಣೇಶ್ ಪ್ರಸಾದ್ ತಿಳೀಸಿದರು.
ಬಿಜೆಪಿ ಹತಾಶೆಯಿಂದ ಪ್ರತಿಭಟನೆ: ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾರ್ಯಕ್ರಮಗಳು, ಸಿಎಂ ಭೇಟಿಯನ್ನು ಸಹಿಸದ ಬಿಜೆಪಿ ಮುಖಂಡರು ಹಾಗು ಮಾಜಿ ಶಾಸಕರು ಹತಾಶೆಯಿಂದ ಪ್ರತಿಭಟನೆ ಮಾಡುತ್ತಿದ್ಧಾರೆ. ಹೊರ ರಾಜ್ಯಗಳಿಗೆ ಎಂಸ್ಯಾAಡ್, ಕಲ್ಲು ಇತರೇ ಕಟ್ಟಡ ಸಾಮಗ್ರಿಗಳನು ಸಾಗಾಣಿಕೆಗೆ ಅವಕಾಶ ನೀಡಿರುವುದು 2001 ಬಿಜೆಪಿ ಸರ್ಕಾರ ಅವಧಿಯಲ್ಲಿ. ಅಲ್ಲಿಂದಲು ಕೇರಳಕ್ಕೆ ನಮ್ಮ ರಾಜ್ಯದಿಂದ ಪರವಾನಗಿ ಹೊಂದಿರುವ ಲಾರಿಗಳು ಹೋಗುತ್ತಿವೆ. ಈಗ ಟಿಪ್ಪರ್ ಹಾವಳಿ ಆಗಿಲ್ಲ. ಅಕ್ರಮ ಹಾಗು ರಹದಾರಿ ಇಲ್ಲದ ಲಾರಿಗಳ ವಿರುದ್ದ ಕ್ರಮ ಕೈಗೊಳ್ಳಲು ಸೂಚನೆಯನ್ನು ನೀಡಿದ್ದೇನೆ ಎಂದರು.
ರೈತ ಸಂಘದವರು 2 ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಮಟ್ಟದಲ್ಲಿ ಚರ್ಚೆಯಾಗಬೇಕು. ಸಫಾರಿ ನಿಷೇಧ ಹಾಗೂ ಹೊರ ರಾಜ್ಯಗಳಿಗೆ ರಾಜ್ಯದ ಖನಿಜ ಸಂಪತ್ತು ಸಾಗಾಣಿಕೆ ತಡೆಯಬೇಕು ಒತ್ತಾಯಗಳು ನಮ್ಮ ಹಂತದಲ್ಲಿ ಈಡೇರುವುದಿಲ್ಲ. ಸಫಾರಿಯನ್ನು ನಿಲ್ಲಿಸುವುದು ಕೇಂದ್ರ ಸರ್ಕಾರದ ವಿಚಾರವಾಗಿದೆ. ಇದನ್ನು ಬಿಟ್ಟರೆ ಇನ್ನಿತರ ಹಕ್ಕೋತ್ತಾಯಗಳನ್ನು ಈಡೇರಿಸಲು ಈಗಾಗಲೇ ತಾಲೂಕು ಹಾಗೂ ಜಿಲ್ಲಾಡಳಿತ ಮುಂದಾಗಿದೆ. ಇಷ್ಟಾಗಿ ಅವರು ನಿರಂತರ ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ಸಹ ಸ್ಥಳಕ್ಕೆ ತೆರಳಿ ಪ್ರತಿಭಟನೆಯನ್ನು ವಾಪಸ್ ಪಡೆದುಕೊಳ್ಳುವಂತೆ ಮನವಿ ಮಾಡಿದ್ದೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ,ಚಾಮುಲ್ ಅಧ್ಯಕ್ಷ ಎಚ್.ಎಸ್. ನಂಜುಂಡ ಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಜಿ.ಪಂ.ಮಾಜಿ ಸದಸ್ಯ ಮಹೇಶ್, ಬ್ಲಾಕ್ ಅಧ್ಯಕ್ಷರಾದ ರಾಜಶೇಖರ್, ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಹೊಸಹಳ್ಳಿ ಮಧುಸೂಧನ್, ತಾ.ಪಂ.ಮಾಜಿ ಅಧ್ಯಕ್ಷ ಎಚ್.ಎನ್. ಬಸವರಾಜು, ಹಾಜರಿದ್ದರು.

Leave a Reply

Your email address will not be published. Required fields are marked *